Chief Editor
Manohar. R (Manu)
Photo Journalist
chitrataramanu@gmail.com
+91 9845549026
ಮರಳು ಶಿಲ್ಪದ ತವರೂರು ಒರಿಸ್ಸಾದ ಪುರಿ ಬೀಚ್ ನಲ್ಲಿ ಅರಳಿದ ಕಿಚ್ಚ ಸುದೀಪ್ ಅವರ ಮರಳು ಶಿಲ್ಪ
Posted date: 01 Thu, Sep 2022 09:54:15 PM
ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. 

ಈ ಶಿಲ್ಪವು 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಎಂದು ಶಿಲ್ಪಿ ತಿಳಿಸಿದ್ದಾರೆ. ಸುದೀಪ್ ಅವರ ಆಪ್ತರಾದ ವೀರಕಪುತ್ರ ಶ್ರೀನಿವಾಸ ಅವರು ಯಾವಫೋಟೋ ಬಳಸಬೇಕು ಮತ್ತು ಕನ್ನಡ ಬರವಣಿ ಹೇಗಿರಬೇಕು ಎಂಬ ಗೊಂದಲಕ್ಕೆ ಅಗತ್ಯವಿದ್ದ ಮಾಹಿತಿಯನ್ನು ನೀಡಿರುವುದನ್ನು ತಿಳಿಸಿದರು. 

ದಕ್ಷಿಣ ಭಾರತದಲ್ಲಿಯೇ ಈ ಮರಳು ಶಿಲ್ಪ ಗೌರವಕ್ಕೆ ಪಾತ್ರವಾಗುತ್ತಿರುವ ಎರಡನೇ ಕಲಾವಿದರೆಂದರೆ ಅದು ಕಿಚ್ಚ ಸುದೀಪ್ ಅವರು ಮಾತ್ರ. ಈ ಹಿಂದೆ 2020ರಲ್ಲಿ ಡಾ.ವಿಷ್ಣುವರ್ಧನ್ ಅವರ 70ನೇ ಜನ್ಮದಿನ ಪ್ರಯುಕ್ತ ಮರಳು ಶಿಲ್ಪದ ಗೌರವ ನೀಡಲಾಗಿತ್ತು ಎಂಬುದು ಬಿಟ್ಟರೆ ಇದುವರೆಗೆ ಯಾವುದೇ ದಕ್ಷಿಣ ಭಾರತದ ನಟರಿಗೆ ಈ ಗೌರವ ದಕ್ಕಿರಲಿಲ್ಲ. ಈಗ ಎರಡನೆಯವರಾಗಿ ಕಿಚ್ಚ ಸುದೀಪ್ ಅವರು ಅಂತಹ ಗೌರವವಕ್ಕೆ ಪಾತ್ರರಾಗಿದ್ದಾರೆ. ನಿನ್ನೆ ತಾನೇ ಅಂಚೆ ಇಲಾಖೆಯಿಂದ ವಿಶೇಷ ಲಕೋಟೆಯ ಗೌರವವನ್ನು ಪಡೆದಿದ್ದಂತಹ ಸುದೀಪ್ ಅವರು ಈಗ ಮರಳು ಶಿಲ್ಪ ಗೌರವಕ್ಕೂ ಪಾತ್ರರಾಗಿರುವುದು ಅವರ ಅಭಿಮಾನಿಗಳನ್ನು ಖುಷಿಯಿಂದ ಕುಣಿಯುವಂತೆ ಮಾಡಿದೆ. 

 
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಮರಳು ಶಿಲ್ಪದ ತವರೂರು ಒರಿಸ್ಸಾದ ಪುರಿ ಬೀಚ್ ನಲ್ಲಿ ಅರಳಿದ ಕಿಚ್ಚ ಸುದೀಪ್ ಅವರ ಮರಳು ಶಿಲ್ಪ - Chitratara.com
Copyright 2009 chitratara.com Reproduction is forbidden unless authorized. All rights reserved.