Chief Editor
Manohar. R (Manu)
Photo Journalist
chitrataramanu@gmail.com
+91 9845549026
ಹಿರಿಯ ಕಲಾವಿದ ಲೋಹಿತಾಶ್ವ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ
Posted date: 08 Tue, Nov 2022 08:00:10 PM
ಬೆಂಗಳೂರು,ನ.8- ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ   ಲೋಹಿತಾಶ್ವ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. 
 
ಸುಮಾರು ಒಂದು ತಿಂಗಳಿಂದ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಲೋಹಿತಾಶ್ವ ಇಂದು  ಮಧ್ಯಾಹ್ನ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.ಈ ಮೂಲಕ ಕನ್ನಡ ಚಿತ್ರರಂಗದ ಹಿರಿಯ ಕೊಂಡಿ ಕಳಚಿ ಬಿದ್ದಂತಾಗಿದೆ.
 
ಕಳೆದ ಒಂದು ತಿಂಗಳಿನಿಂದ ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೊಲೋ  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸುಮಾರು ಒಂದು ತಿಂಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಹಿರಿಯ ನಟನನ್ನು ಉಳಿಸುವ ಎಲ್ಲಾ ಪ್ರಯತ್ನಗಳು ವಿಫಲವಾಗಿ ಕೊನೆ ಉಸಿರೆಳಿದಿದ್ದಾರೆ.
 
ಕಳೆದ  ತಿಂಗಳು 9 ಹೃದಯಾಘಾತವಾಗಿತ್ತು ಬಳಿಕ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಕಿಚಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು. 

ಚಿತ್ರರಂಗ ಗಣ್ಯರ ಸಂತಾಪ:  ಹಿರಿಯ ನಟನ ಅಗಲಿಕೆಗೆ ಅನೇಕ ಸಿನಿಮಾ ಗಣ್ಯರು ಮತ್ತು ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. 
 
ಅನಾರೋಗ್ಯಕ್ಕೆ ಒಳಗಾಗುವ ಮುನ್ನ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಶಿಕ್ಷಕರ ದಿನಾಚಾರಣೆಯಂದು ಸನ್ಮಾನ‌ಮಾಡಲಾಗಿತ್ತು. ಅದೇ ಅವರ ಸಾರ್ವಜನಿಕೆ ಕಾರ್ಯಕ್ರಮವಾಗಿತ್ತು

ಬಾಕ್ಸ್ 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನೆ ಹಿರಿಯ  ಕಲಾವಿದ  ಲೋಹಿತಾಶ್ವ ಸುಮಾರು 500 ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.

ಚಿತ್ರರಂಗ ಮಾತ್ರವಲ್ಲದೇ ನಾಟಕಕಾರ, ರಂಗನಾಟಕ ಮತ್ತು ದೂರದರ್ಶನದ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಇನ್ನು ಇಂಗ್ಲಿಷ್ ಪ್ರಾಧ್ಯಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಹಿರಿಯ ಕಲಾವಿದನ ನಿಧನಕ್ಕೆ ಕನ್ನಡ ಚಿತ್ರರಂಗ ತೀವ್ರ ಕಂಬನಿ ಮಿಡಿದಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಹಿರಿಯ ಕಲಾವಿದ ಲೋಹಿತಾಶ್ವ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ - Chitratara.com
Copyright 2009 chitratara.com Reproduction is forbidden unless authorized. All rights reserved.