Chief Editor
Manohar. R (Manu)
Photo Journalist
chitrataramanu@gmail.com
+91 9845549026
ವೈರಂ ಚಿತ್ರದ ಟೀಸರ್ ಬಿಡುಗಡೆ
Posted date: 10 Tue, Jan 2023 09:55:33 AM
ಒಬ್ಬ ಆಂಗ್ರಿ ಯಂಗ್ ಮ್ಯಾನ್ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ ಚಿತ್ರ ವೈರಂ. ಹಿರಿಯನಟ ದೇವರಾಜ್ ಪುತ್ರ ಪ್ರಣಾಮ್ ದೇವರಾಜ್ ಅಭಿನಯದ ದ್ವಿತೀಯ ಚಿತ್ರವೂ ಇದಾಗಿದ್ದು, ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಜಿಟಿ ಮಾಲ್ ನ ಎಂಎಂಬಿ ಲೆಗೆಸಿ ಕಾಲ್ ನಲ್ಲಿ ನೆರವೇರಿತು. ಈ ದೇವರಾಜ್, ಚಂದ್ರಕಲಾ ದೇವರಾಜ್ ಹಾಗೂ ರಾಗಿಣಿ ಪ್ರಜ್ವಲ್ ಉಪಸ್ಥಿತರಿದ್ದರು. ಜೆ.ಮಲ್ಲಿಕಾರ್ಜುನ ಹಾಗೂ ವೇಮಾರೆಡ್ಡಿ ಅವರ ನಿರ್ಮಾಣದ ಈ ಚಿತ್ರ ಬಿಡುಗಡೆಗೆ ಸಿದ್ದವಿದೆ. 
 
ಟೀಸರ್ ಲಾಂಚ್ ಮಾಡಿದ ದೇವರಾಜ್ ಮಾತನಾಡುತ್ತ ಕನ್ನಡ ಚಿತ್ರರಂಗ ಈಗ ಮತ್ತೆ ಬ್ಯುಸಿಯಾಗಿದೆ. ಇಂಥ ಸಮಯದಲ್ಲಿ ನನ್ನ ಮಗನ ೨ನೇ ಸಿನಿಮಾ ಬರ್ತಿದೆ. ಸಾಯಿಶಿವನ್ ಒಂದೊಳ್ಳೆ ಆಕ್ಷನ್ ಪ್ಯಾಕ್ಡ್ ಸಿನಿಮಾ ಮಾಡಿದ್ದಾರೆ. ಚಿತ್ರದ ಹಾಡುಗಳನ್ನು ಕೇಳಿದ್ದೇನೆ. ಮ್ಯೂಸಿಕ್ ಚೆನ್ನಾಗಿದೆ. ಈ ಸಿನಿಮಾ ೧೦೦ ದಿನ ಓಡಲಿ ಎಂದು ಶುಭ ಹಾರೈಸಿದರು. 
 
ನಾಯಕ ಪ್ರಣಾಮ್ ಮಾತನಾಡಿ ಚಿಕ್ಕ ವಯಸಿನಿಂದ ಅಪ್ಪ, ಅಣ್ಣನ ಸಿನಿಮಾಗಳನ್ನು ನೋಡಿಕೊಂಡು ಬೆಳೆದವನು.೪ ವರ್ಷಗಳ ನಂತರ ಈ ಸ್ಟೇಜ್ ಮೇಲೆ ನಿಂತು ಮಾತಾಡ್ರಿದ್ಸೇನೆ. ಹಿಂದಿನ  ಚಿತ್ರದಲ್ಲಿ ಚಾಕೊಲೇಟ್ ಬಾಯ್ ಆಗಿದ್ದೆ.ಈ ಸಿನಿಮಾದಲ್ಲಿ ಆಕ್ಷನ್ ಹೀರೋ ಆಗಿದ್ದೆನೆ. ಸಾಯಿ ಶಿವನ್ ಅವರಲ್ಲಿ ತುಂಬಾ ಕಾನ್ಫಿಡೆನ್ಸ್ ಇದೆ. ನಿರ್ಮಾಪಕರಾಗಿ ಮಲ್ಲಿಕಾರ್ಜುನ ಹಾಗೂ ವೇಮಾರೆಡ್ಡಿ ಅವರು ತುಂಬಾ ಸಪೋರ್ಟ್ ಮಾಡಿದ್ದಾರೆ. ಡಿ.ಓ.ಪಿ. ಕೆಲಸವೂ ಅದ್ಭುತವಾಗಿದೆ. ನಾನು ಇಷ್ಟು ಚೆನ್ನಾಗಿ ತೆರೆಮೇಲೆ ಕಾಣಿಸಲು ಅವರೇ ಕಾರಣ. ಒಬ್ಬ ಹೀರೋ ಗುರುತಿಸಿಕೊಳ್ಳೋದು ಅವನೆದುರು ಸ್ಟ್ರಾಂಗ್ ವಿಲನ್ ಇದ್ದಾಗ, ನನಗೆ ಎರಡನೇ ಚಿತ್ರದಲ್ಲೇ ಗರುಡರಾಮ್ ರಂಥ ಖಳನಟರೆದುರು ಅಭಿನಯಿಸುವ ಅವಕಾಶ ಸಿಕ್ತು. ಶಂಕರ್ ಅಶ್ವಥ್ ಹಾಗೂ ವೀಣಾಸುಂದರ್ ನನ್ನ ತಂದೆ, ತಾಯಿ ಪಾತ್ರ ಮಾಡಿದ್ದಾರೆ.ಚಿತ್ರದಲ್ಲಿ ಎಂಜಾಯ್ ಮಾಡುವಂಥ ೪ ಹಾಡುಗಳಿದ್ದು, ಕವಿರಾಜ್, ನಾಗೇಂದ್ರ ಪ್ರಸಾದ್, ರಾಮ್ ನಾರಾಯಣ್ ಒಳ್ಖೇ ಲಿರಿಕ್ ಬರೆದಿದ್ದಾರೆ. ನನ್ನಕೈಲಿ ಈಥರ ಡಾನ್ಸ್ ಮಾಡಲು ಆಗುತ್ತೆ ಅಂದ್ಕೊಂಡೇ ಇರಲಿಲ್ಲ ಎಂದರು. ಚಿತ್ರದ ನಾಯಕಿ ಮಾನಲ್ಲೆ ಮಾತನಾಡುತ್ತ ಇದು ನನ್ನ ಮೊದಲ ಕನ್ನಡ ಚಿತ್ರ. ಒಬ್ಬ ಕ್ರಿಶ್ಚಿಯನ್ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಒಂದೊಳ್ಳೆ ಲವ್ ಸ್ಟೋರಿ ಚಿತ್ರದಲ್ಲಿದೆ ಎಂದರು. ಖಳನಾಯಕ ಗರುಡರಾಮ್ ಮಾತನಾಡಿ ಚಿತ್ರದಲ್ಲಿ ಜನರಿಗೆ ಒಂದು ಯೂನಿವರ್ಸಲ್ ಮೆಸೇಜ್ ಇದೆ. ಜನ ಬದಲಾಗಬೇಕು ಎಂದು ಹೇಳಲಾಗಿದೆ. ಜನ ಸಪೋರ್ಟ್ ಮಾಡುತ್ತಾರೆಂಬ ನಂಬಿಕೆಯಿದೆ ಎಂದರು. ನಿರ್ದೇಶಕ ಸಾಯಿಶಿವನ್ ಮಾತಾಡುತ್ತ  ಇದು ಬೈಲಾಂಗ್ಯುಯಲ್ ಸಿನಿಮಾ ಆಗಿದ್ದು,  ಚಿತ್ರದಲ್ಲಿ ಹೀರೋ ಡೆಡಿಕೇಶನ್, ಇನ್ವಾಲ್ ಮೆಂಟ್ ತುಂಬಾ ಚೆನ್ನಾಗಿತ್ತು. ಆತ ಸಿಂಗಲ್ ಟೇಕ್ ಆರ್ಟಿಸ್ಟ್ ಎಂದು ಹೊಗಳಿದರು. ನಿರ್ಮಾಪಕರೂ ಚಿತ್ರದ ಬಗ್ಗೆ ಮಾತನಾಡಿದರು. ಗೋಪಿನಾಥ್ ಅವರ ಛಾಯಾಗ್ರಹಣ ಹಾಗೂ ಮಹತಿ ಸ್ವರಸಾಗರ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ವೈರಂ ಚಿತ್ರದ ಟೀಸರ್ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.