ಕನ್ನಡದ ಒಟ್ಟು ಸಿನಿಮಾ ಬೆಳವಣಿಗೆ, ಇತಿಹಾಸವನ್ನು ರಾಷ್ಟ್ರೀಯ ನೆಲೆಯಲ್ಲಿ ವಿಶ್ಲೇಷಣೆ ಮಾಡುವುದು ತುರ್ತು ಅಗತ್ಯವಿದೆ ಎಂದು
ಹಿರಿಯ ನಿರ್ದೇಶಕ ಪದ್ಮಶ್ರೀ ಗಿರೀಶ್ ಕಾಸರವಳ್ಳಿ ಇಂದಿಲ್ಲಿ ಹೇಳಿದ್ದಾರೆ.
ಸಂಸ್ಕಾರ ,ಸ್ಕೂಲ್ ಮಾಸ್ಟರ್ ರೀತಿಯ ಚಿತ್ರಗಳನ್ನು ಸರಿಯಾಗಿ ಬಿಂಬಿಸುವ ಕೆಲಸ ಮಾಡಿಲ್ಲ. ಬದಲಾಗಿ ರೌಡಿಂಸಂ ಮಾದರಿಯ ಸಿನಿಮಾಗಳನ್ನು ಹೆಚ್ಚು ಹೆಚ್ಚು ಪ್ರೊಜೆಕ್ಟ್ ಮಾಡಿ ರಾಜ್ಯದ ಹೊರಗೂ ತಾವೇ ತಪ್ಪು ಕಲ್ಪನೆ ಮೂಡಿಸಿದ್ದೇವೆ ಅದನ್ನು ಹೋಗಲಾಡಿಸುವ ಅಗತ್ಯವಿದೆ ಎಂದರು.
ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಉದ್ಘಾಟಿಸಿ, ಲಾಂಛನ ಬಿಡುಗಡೆ ಮಾಡಿ ಮಾತನಾಡಿ ಅವರು, ಕನ್ನಡದ ಅಸ್ಮಿತೆ, ಕಲಾತ್ಮಕ ಹೆಗ್ಗೆಳಿಕೆ ತೋರಿಸಬೇಕು, ಆ ಕೆಲಸ ಮಾಡಬೇಕು. ಬೆಂಗಳೂರು ಅಲ್ಲದೆ ರಾಜ್ಯದ ಆಚೆಗೂ ಕನ್ನಡದಲ್ಲಿ ಈ ರೀತಿ ಸಾಧನೆ ಆಗಿದೆ ಎನ್ನುವುದು ತಿಳಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಬಳೆ ಕೆಂಪ, ಪಿಂಕಿ ಎಲ್ಲಿ, ನಾನು ಕುಸುಮ, ಪೆದ್ದರು, ಶಿವಂ, ಜಗತ್ತಿನಾದ್ಯಂತ ಸದ್ದು ಮಾಡುತ್ತಿವೆ. ಅವುಗಳು ಜನರಿಗೆ ತಲುಪುತ್ತಿಲ್ಲ. ಈ ಕೆಲಸವನ್ನು ಸಿನಿಮಾ ಪತ್ರಕರ್ತರು ಮಾಡಬೇಕು ಎಂದು ಅವರು ಹೇಳಿದ್ದಾರೆ
ಕನ್ನಡದಲ್ಲಿ ಒಳ್ಳೆಯ ಸಿನಿಮಾಗಳನ್ನು ಪ್ರೊಜೆಕ್ಟ್ ಮಾಡುತ್ತಿಲ್ಲ.ಕಾಂತಾರ ತನ್ನ ಯಶಸ್ಸಿನಿಂದ ಯಶಸ್ಸು ಗಳಿಸಿದೆ. ಆದರೆ ಕೆಜಿಎಫ್ ಆಗಲ್ಲ ಎಂದು ಅವರು ಹೇಳಿದ್ದಾರೆ.
ದಾಖಲು ಅಗತ್ಯ;
ದಲಿತ, ಬಂಡಾಯ ಸಾಹಿತ್ಯ ಕನ್ನಡ ಚಿತ್ರರಂಗದಲ್ಲಿ ಚಿತ್ರ ಗೀತೆಯಲ್ಲಿ ಬಂದಿದೆ. ಆದರೆ ಸಿನಿಮಾದಲ್ಲಿ ಬಂದಿಲ್ಲ.ಅದನ್ನು ದಾಖಲು ಮಾಡವ ಅಗತ್ಯವಿದೆ ಎಂದರು.
ಕೃತಿಯನ್ನು ಸಮಾಜದ ಬೆಳವಣಿಗೆ,ಕಾಲ, ಮತ್ತು ಕಾಲಾತೀತವಾಗಿ ನೋಡಬೇಕಾಗಿದೆ. ಪುಟ್ಟಣ್ಣ ಅವರ ಸಾಂಸ್ಕೃತಿಕ, ಧಾರ್ಮಿಕ ನಿಲುವು ಇಟ್ಟುಕೊಂಡು ವಿಶ್ಲೇಷಣೆ ಮಾಡಬೇಕು.ಸಿನಿಮಾ ಶೂನ್ಯದಲ್ಲಿ ಸೃಷ್ಠಿ ಆಗುವುದಿಲ್ಲ ಎಂದು ಹೇಳಿದರು.
ತಾವು ಚಿತ್ರರಂಗ ಪ್ರವೇಶಿಸಿದ್ದು 1975ರಲ್ಲಿ ಆಗ ಚಲನಚಿತ್ರ ಪತ್ರಕರ್ತಕರ ಬೆನ್ನೆಲೆಬಾಗಿದ್ದರಿಂದ ಈ ಮಟ್ಟಕ್ಕೆ ಬೆಳೆಯಲು ಸಹಕಾರಿಯಾಯಿತು. ಕೃತಿಕಾರ ಇಲ್ಲದಿದ್ದರೆ ವಿಮರ್ಶಕನ ಅಗತ್ಯವಿಲ್ಲ. ವಿಮರ್ಶಕ ಆಮ್ಲಜನಕ ರೀತಿ ಕೆಲಸ ಮಾಡುತ್ತಾರೆ. ಸಿನಿಮಾ ವಿಮರ್ಶೆ ಮಾಡದಿದ್ದರೆ ನನ್ನನ್ನು ನಾನು ಅರ್ಥ ಮಾಡಿಕೊಳ್ಳಲು ಸಾದ್ಯವಾಗುವುದಿಲ್ಲ ಎಂದರು.
ವಿಮರ್ಶಕ ಮಾದ್ಯಮ ಉದ್ಯಮ ಬೆಳೆಯಲಿದೆ. ಇಲ್ಲದಿದ್ದರೆ ಸ್ಥಗಿತವಾಗಲಿದೆ. ಚಲನಚಿತ್ರ ಪತ್ರಕರ್ತರ ಸಂಘವನ್ನು ಮತ್ತೊಮ್ಮೆ ಉದ್ಘಾಟನೆಯಾಗಿರುವುದು ಖುಷಿಕೊಟ್ಟಿದೆ ..ಸಾಂಸ್ಕೃತಿಕವಾಗಿ ಮುಖ್ಯವಾಗಬೇಕು. ಸಮಾರಂಭ ಮೌಲಿಕವಾಗಿದ್ದವು, ಪತ್ರಕರ್ತರ ಪರಿಷತ್ ಪ್ರತಿ ವಾರ ಚಿತ್ರ ವಿಮರ್ಶೆ ಮಾಡಿ, ಆ ಚಿತ್ರತಂಡದ ಬಗ್ಗೆ ಸಂವಾದ ನಡೆಸುತ್ತಿತ್ತು ಎಂದರು
ಹಿರಿಯ ಪರ್ತಕರ್ತೆ ಡಾ. ವಿಜಯಾ ಮಾತನಾಡಿ, ಎಚ್ಚರದಿಂದ ಬರವಣಿಗೆ ಮಾಡುವ ರೀತಿ ಇತ್ತು. ಕನ್ನಡದಲ್ಲಿ ಅನೇಕ ಪ್ರಶಸ್ತಿಯನ್ನು ಸರ್ಕಾರ ಸ್ಥಾಪನೆ ಮಾಡಲು ಸಿನಿಮಾ ಪರ್ತಕರ್ತರ ಪಾತ್ರವಿದೆ ಎಂದು ಚಲನಚಿತ್ರ ಮತ್ತು ಪತ್ರಕರ್ತರ ನಡುವಿನ ಒಡನಾಟ ಸೇರಿದಂತೆ ವಿವಿಧ ವಿಷಯಗಳ ಮೇಲೆ ಬೆಳಕು ಚೆಲ್ಲಿದರು.
ಸಂಘದ ಅಧ್ಯಕ್ಷ ಬಾ.ನಾ ಸುಬ್ರಮಣ್ಯ ಸಂಘದ ಕಾರ್ಯ ಚಟುವಟಿಕೆ ಉದ್ದೇಶಗ ಕುರಿತು ವಿವರಿಸಿದರು.
ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ ಹರೀಶ್, ಚಲನ ಚಿತ್ರ ಅಕಾಡಮಿ ಅಧ್ಯಕ್ಷ ಅಶೋಕ್ ಕಶ್ಯಪ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಿರ್ದೇಶಕರ ಸಂಘದ ಅಧ್ಯಕ್ಷ ನಾಗೇಂದ್ರ ಅರಸ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಅಖಿಲ ಬಾರತ ಕಾರ್ಯನಿರತ ಒಕ್ಕೂಟದ ಅಧ್ಯಕ್ಷ ಬಿ.ವಿ ಮಲ್ಲಿಕಾರ್ಜುನಯ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.