Chief Editor
Manohar. R (Manu)
Photo Journalist
chitrataramanu@gmail.com
+91 9845549026
ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಪ್ತಭಾಷೆಯ ``ಅಜಾಗ್ರತ``ಚಿತ್ರ ಆರಂಭ
Posted date: 16 Tue, May 2023 10:55:09 AM
"ಅಜಾಗ್ರತ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರವಿರಾಜ್ ನಿರ್ಮಿಸುತ್ತಿದ್ದಾರೆ.  ಎಂ.ಶಶಿಧರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. 

ಏಳು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಡಬ್ ಮಾಡದೆ, ಆಯಾ ಭಾಷೆಗಳಲ್ಲಿ ಪ್ರತ್ಯೇಕವಾಗಿ ಚಿತ್ರೀಕರಣ ನಡೆಯಲಿರುವುದು ಈ ಚಿತ್ರದ ವಿಶೇಷ .
Kannada Cinema's Latest Wallpapers
Kannada Cinema's Latest Videos
Kannada Movie/Cinema News - ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಪ್ತಭಾಷೆಯ ``ಅಜಾಗ್ರತ``ಚಿತ್ರ ಆರಂಭ - Chitratara.com
Copyright 2009 chitratara.com Reproduction is forbidden unless authorized. All rights reserved.