Chief Editor
Manohar. R (Manu)
Photo Journalist
chitrataramanu@gmail.com
+91 9845549026
ದೆಹಲಿಯ ರಾಜ್ ಪಥ್ ನಲ್ಲಿ ರಿಲೀಸ್ ಆಯ್ತು ಆಕ್ಷನ್ ಪ್ಯಾಕ್ಡ್ `ಸ್ಪೈ` ಟೀಸರ್….ಸುಭಾಷ್ ಚಂದ್ರಬೋಸ್ ಜೀವನ ರಹಸ್ಯದ ಕಥೆ ಹೇಳಲಿದ್ದಾರೆ ನಿಖಿಲ್ ಸಿದ್ದಾರ್ಥ್
Posted date: 17 Wed, May 2023 09:53:54 AM
ಟಾಲಿವುಡ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸ್ಪೈ..ಕಾರ್ತಿಕೇಯ-2 ಬಳಿಕ ಅಖಿಲ್ ಸಿದ್ದಾರ್ಥ್ ನಟಿಸುತ್ತಿರುವ ಆಕ್ಷನ್ ಪ್ಯಾಕ್ಡ್ ಕಥಾಹಂದರ ಈ ಚಿತ್ರದ ಟೀಸರ್ ದೆಹಲಿಯ ರಾಜ್ ಪಥ್ ನಲ್ಲಿರುವ ಸುಭಾಷ್ ಚಂದ್ರಬೋಸ್ ಪುತ್ಥಳಿ ಮುಂದೆ ಅನಾವರಣ ಮಾಡಲಾಗಿದೆ. 

ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಸಾವನ್ನಪ್ಪಿದ್ದಾರೆ ಎನ್ನಲಾದ ವಿಚಾರಗಳನ್ನು ಬೆನ್ನತ್ತುವ ಗೂಢಚಾರಿ ಪಾತ್ರದಲ್ಲಿ ನಿಖಿಲ್ ಸಿದ್ದಾರ್ಥ್ ಅಭಿನಯಿಸಿದ್ದು, ಐಶ್ವರ್ಯ ಮೆನನ್ ನಾಯಕಿಯಾಗಿ, ಸನ್ಯಾ ಠಾಕೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.  

ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್ ಸ್ಪೈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಎವರು ಮತ್ತು ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ED ಎಂಟರ್‌ಟೈನ್‌ಮೆಂಟ್‌ನಡಿ ಚರಣ್ ರಾಜ್ ಉಪ್ಪಲಪತಿ ಜೊತೆಗೂಡಿ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದಾರೆ. 

ಸ್ಪೈ ಸಿನಿಮಾದ ಪೋಸ್ಟರ್ ಹಾಗೂ ಗ್ಲಿಂಪ್ಸ್ ನಿರೀಕ್ಷೆ ಹೆಚ್ಚಿಸಿದ್ದು, ನಿಖಿಲ್‌ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ‌ ಮೂಡಿ ಬರ್ತಿರುವ ಚಿತ್ರಕ್ಕೆ ರಾಜಶೇಖರ್ ರೆಡ್ಡಿ  ನಿರ್ಮಾಣದ ಜೊತೆಗೆ ಕಥೆ ಕೂಡ ಬರೆದಿದ್ದು, ಗ್ಯಾರಿ ಬಿ.ಎಚ್. ನಿರ್ದೇಶನದ ಜೊತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಸಿನಿಮಾದಲ್ಲಿ‌ ನಿಖಿಲ್‌ಗೆ ಜೋಡಿಯಾಗಿ ಐಶ್ವರ್ಯ ಮೆನನ್ ನಟಿಸಿದ್ದು, ಅಭಿನವ್ ಗೋಮತಮ್, ಮಕರಂದ್ ದೇಶಪಾಂಡೆ, ನಿತಿನ್ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್, ಸೋನಿಯಾ ನರೇಶ್ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. 


ಹೈ ಬಜೆಟ್‌ನಲ್ಲಿ ತಯಾರಾಗಲಿರುವ ಸ್ಪೈ ಸಿನಿಮಾಗೆ ಹಾಲಿವುಡ್ ತಂತ್ರಜ್ಞರ ಮೆರಗು ಸಿಕ್ಕಿದೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ತಯಾರಾಗಿರುವ ಸ್ಪೈ ಜೂನ್ 29ರಂದು ವರ್ಲ್ಡ್ ವೈಡ್ ರಿಲೀಸ್ ಆಗಲಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ದೆಹಲಿಯ ರಾಜ್ ಪಥ್ ನಲ್ಲಿ ರಿಲೀಸ್ ಆಯ್ತು ಆಕ್ಷನ್ ಪ್ಯಾಕ್ಡ್ `ಸ್ಪೈ` ಟೀಸರ್….ಸುಭಾಷ್ ಚಂದ್ರಬೋಸ್ ಜೀವನ ರಹಸ್ಯದ ಕಥೆ ಹೇಳಲಿದ್ದಾರೆ ನಿಖಿಲ್ ಸಿದ್ದಾರ್ಥ್ - Chitratara.com
Copyright 2009 chitratara.com Reproduction is forbidden unless authorized. All rights reserved.