ಉಗ್ರಂ, ಮಫ್ತಿ, ಕೆಜಿಎಫ್ ನಂತಹ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿರುವ ರವಿ ಬಸ್ರೂರ್ ಗಾಯಕರಾಗಿಯೂ, ನಿರ್ಮಾಪಕರಾಗಿಯೂ ಸ್ಯಾಂಡಲ್ ವುಡ್ ಗೆ ಚಿರಪರಿತ.. ಪರಭಾಷೆಯ ಚಿತ್ರಗಳಿಗೂ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ರವಿ ಬಸ್ರೂರ್ ಪುತ್ರ ಮಾಸ್ಟರ್ ಪವನ್ ಬಸ್ರೂರು ಸಿನಿಮಾ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟಿದ್ದಾರೆ.
ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ ಸಿನಿಮಾ ಮೇಲಿನ ಅಪಾರ ಪ್ರೀತಿಯಿಂದ ತಮ್ಮದೇ ಶರಣ್ಯ ಫಿಲ್ಮಂಸ್ ನಡಿ ಕ್ಲಿಕ್ ಎಂಬ ಹೊಸ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ ರವಿ ಬಸ್ರೂರ್ ಮಗ ಪವನ್ ಬಸ್ರೂರ್ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದಾರೆ. ಮಾಸ್ಟರ್ ಪವನ್ ಜೊತೆಯಲ್ಲಿ ಮತ್ತೊಬ್ಬ ಯುವ ನಟ ಕಾರ್ತಿಕ್ ಕೂಡ ಮುಖ್ಯಭೂಮಿಕೆಯಲ್ಲಿ ನಟಿಸ್ತಿದ್ದು, ಉಳಿದಂತೆ ಚಂದ್ರಕಲಾಮೋಹನ್, ರಚನಾ ದಶರತ್, ಸಂಜು ಬಸಯ್ಯ, ಸಿಲ್ಲಿಲಲ್ಲಿ ಆನಂದ್, ಸುಮನ್ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.