Chief Editor
Manohar. R (Manu)
Photo Journalist
chitrataramanu@gmail.com
+91 9845549026
ಎಂ.ಜೈರಾಮ್ ನಿರ್ದೇಶನದ``ಚೇಸರ್``ಫಸ್ಟ್ ಲುಕ್ ಸುಮಂತ್ ಶೈಲೇಂದ್ರ ಹುಟ್ಟುಹಬ್ಬಕ್ಕೆ ಬರಲಿದೆ
Posted date: 04 Mon, Sep 2023 07:49:49 PM
ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಎಂ ಜೈರಾಮ್ ನಿರ್ದೇಶನದಲ್ಲಿ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸುತ್ತಿರುವ "ಚೇಸರ್" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದ್ದು, ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.

ಸೆಪ್ಟೆಂಬರ್ 7 ನಾಯಕ ,  ಶೈಲೇಂದ್ರ ಹುಟ್ಟುಹಬ್ಬ. ಅದೇ ದಿನ "ಚೇಸರ್" ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಸುಮಂತ್ ಅವರಿಗೆ ಹುಟ್ಟುಹಬ್ಬದ ಉಡುಗೊರೆ ನೀಡಲು ಚಿತ್ರತಂಡ ಮುಂದಾಗಿದೆ‌.

ಸಸ್ಪೆನ್ಸ್ ವಿತ್ ಆಕ್ಷನ್ ಜಾನರ್ ನ ಈ ಚಿತ್ರಕ್ಕೆ ನಿರ್ದೇಶಕ ಎಂ.ಜೈರಾಮ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ‌ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. 

ಸುಮಂತ್ ಶೈಲೇಂದ್ರ ಅವರಿಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸುತ್ತಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ಕಡಿಪುಡಿ ಚಂದ್ರು, ಸಂಗೀತ ಮುಂತಾದವರು "ಚೇಸರ್" ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಎಂ.ಜೈರಾಮ್ ನಿರ್ದೇಶನದ``ಚೇಸರ್``ಫಸ್ಟ್ ಲುಕ್ ಸುಮಂತ್ ಶೈಲೇಂದ್ರ ಹುಟ್ಟುಹಬ್ಬಕ್ಕೆ ಬರಲಿದೆ - Chitratara.com
Copyright 2009 chitratara.com Reproduction is forbidden unless authorized. All rights reserved.