ವಿಭಿನ್ನ ಕಥಾಹಂದರ ಹೊಂದಿರುವ ಪರಿಶುದ್ಧಂ ಚಿತ್ರವು ಶುಕ್ರವಾರ ಬಿಡುಗಡೆಗೊಂಡಿದೆ. ಎಲ್ಲಾ ಕಡೆಗಳಿಂದಲೂ ಉತ್ತಮ ಪ್ರತಿಕ್ರಿಯೆ ಬರುತ್ತಿರುವುದರಿಂದ ತಂಡಕ್ಕೆ ಸಂತಸ ತಂದಿದೆ. ಅದರಲ್ಲೂ ಸಿನಿಮಾಕ್ಕೆ ಕಥೆ,ಸಾಹಿತ್ಯ, ಸಂಗೀತ, ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಪಾಲುದಾರುರಾಗಿರುವ ಆರೋನ್ ಕಾರ್ತಿಕ್ವೆಂಕಟೇಶ್ ಅವರ ಶ್ರಮ ನಿಜಕ್ಕೂ ಸಾರ್ಥಕ ಅನಿಸಿದೆ. ಪ್ರಾರಂಭದಿಂದ ಕೊನೆತನಕ ಎಲ್ಲಾ ಜವಬ್ದಾರಿಗಳನ್ನು ನಿಭಾಯಿಸಿದ್ದು ಯಶಸ್ಸಿಗೆ ಕಾರಣವಾಗಿದೆ. ಮದುವೆ ಅನ್ನುವ ಪದ್ದತಿ ಪರಿಶುದ್ದವಾದದು. ಗಂಡಹೆಂಡತಿ ಸಂಬಂಧದಲ್ಲಿ ಮೂರನೇ ವ್ಯಕ್ತಿ ಪ್ರವೇಶ ಆಗಬಾರದೆಂದು ಸಂದೇಶದಲ್ಲಿ ಹೇಳಲಾಗಿದೆ. ಇದನ್ನು ಕಮರ್ಷಿಯಲ್ ರೀತಿಯಲ್ಲಿ ತೋರಿಸಲಾಗಿದೆ.
ನಟಿ ಕಲ್ಪನಾರಂತೆ ಸ್ಪರ್ಶಾರೇಖಾ ತೂಕದ ಪಾತ್ರವನ್ನು ನಿರ್ವಹಿಸಿದ್ದಾರೆ. ಅತಿಥಿಯಾಗಿ ಎಂ.ಡಿ.ಕೌಶಿಕ್ ಕೊನೆ ದೃಶ್ಯದಲ್ಲಿ ಬರಲಿದ್ದು, ಭಾಗ-೨ರಲ್ಲಿ ಇವರಿಂದಲೇ ಸಿನಿಮಾವು ಶುರುವಾಗುತ್ತದೆ ಅಂತ ಬಿಂಬಿಸಲಾಗಿದೆ. ಚಿತ್ರದಲ್ಲಿ ಇಂಗ್ಲೀಷ್ ಗೀತೆಯೊಂದು ಇರಲಿದ್ದು, ಇದನ್ನು ಗ್ರ್ಯಾಮಿ ಪ್ರಶಸ್ತಿಗೆ ಕಳುಹಿಸಲಾಗಿದೆ. ಎರಡೇ ಸ್ವರದಲ್ಲಿ ಕ ಅಕ್ಷರದೊಂದಿಗೆ ಹಾಡನ್ನು ಬರೆಯಲಾಗಿದ್ದು ಎಂ.ಡಿ.ಪಲ್ಲವಿ ಧ್ವನಿಯಾಗಿದ್ದಾರೆ ಸಿನಿಮಾಕ್ಕೆ ಪ್ಲಸ್ ಪಾಯಿಂಟ್ ಆಗಿದೆ.
ರೋಹನ್ಕಿಡಿಯಾರ್ ಬಂಡವಾಳ ಹೂಡುವ ಜತೆಗೆ ಸ್ವರ್ಶಾರೇಖಾ ಅವರಿಗೆ ಜೋಡಿಯಾಗಿ ನಟಿಸಿದ್ದಾರೆ. ಕುಮಾರ್ರಾಥೋಡ್ ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ತಾರಾಗಣದಲ್ಲಿ ದಿಶಾಪೂವಯ್ಯ ಉಳಿದಂತೆ ಯತಿರಾಜ್,ಭಾರ್ಗವ್, ಅರ್ಚನಾ, ವಿಕ್ಟರಿವಾಸು, ಕುರಿರಂಗ, ಮೈಸೂರುರಮಾನಂದ್, ರಾಜ್ಚರಣ್, ದುಬೈರಫೀಕ್ ಮುಂತಾದವರು ಅಭಿನಯಿಸಿದ್ದಾರೆ. ಸಂಕಲನ ನಿಖಿಲ್, ಸಂಭಾಷಣೆ ವಿನಯ್ಮೂರ್ತಿ, ಸಾಹಸ ರಾಮ್ದೇವ್, ನೃತ್ಯ ಕಿಶೋರ್ ಅವರದಾಗಿದೆ. ಈ ವರ್ಷದ ಹಿಟ್ ಲಿಸ್ಟ್ದಲ್ಲಿ ಪರಿಶುದ್ಧಂ ಸೇರುವ ಲಕ್ಷಣಗಳು ಗೋಚರಿಸುತ್ತಿದೆ.