Chief Editor
Manohar. R (Manu)
Photo Journalist
chitrataramanu@gmail.com
+91 9845549026
ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನಕ್ಕೆ ಮುಂದಾಗಿದ್ದಾರೆ
Posted date: 07 Fri, Jun 2024 � 06:08:50 PM
ಕನ್ನಡ ಕಿರುತೆರೆಯ ಜನಪ್ರಿಯ ಜೋಡಿಗಳಲ್ಲಿ ಒಂದಾದ ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನಕ್ಕೆ ಮುಂದಾಗಿದ್ದಾರೆ.ಈ ಸಂಬಂಧ ಶಾಂತಿನಗರದ ಕೋರ್ಟ್ ನಲ್ಲಿ ನಿನ್ನೆ ಕೇಸ್ ದಾಖಲಿಸಿದ್ದರು. ಪ್ರಕರಣದ ಮೊದಲ ವಿಚಾರಣೆ ಹಿನ್ನೆಲೆಯಲ್ಲಿ ಇಬ್ಬರೂ ಇಂದು 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾದರು.
 
ಬಿಗ್​ ಬಾಸ್​ ಕನ್ನಡ ಸೀಸನ್​ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿ, ಸ್ನೇಹ ನಂತರ ಪ್ರೀತಿಯಾಗಿ ಬದಲಾಯಿತು. 2017ರಲ್ಲಿ ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್​ ಶೆಟ್ಟಿ ಅವರು ಪ್ರಪೋಸ್​ ಮಾಡಿದ್ದರು. ಬಳಿಕ ಅವರಿಬ್ಬರು 2020 ಫೆಬ್ರವರಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.
 
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನಕ್ಕೆ ಮುಂದಾಗಿದ್ದಾರೆ - Chitratara.com
Copyright 2009 chitratara.com Reproduction is forbidden unless authorized. All rights reserved.