Chief Editor
Manohar. R (Manu)
Photo Journalist
chitrataramanu@gmail.com
+91 9845549026
ಆಗಸ್ಟ್ ನಲ್ಲಿ ತೆರೆಗೆ ಬರಲಿದೆ ``ಸಿಗ್ನಲ್ ಮ್ಯಾನ್ 1971`` ಚಿತ್ರ
Posted date: 10 Mon, Jun 2024 07:42:26 PM
ಹಿಂದೂಸ್ಥಾನ್ ಮುಕ್ತ ಮೀಡಿಯಾ ಎಂಟರ್ ಟೈನರ್ ಲಾಂಛನದಲ್ಲಿ ಗಣೇಶ್ ಪ್ರಭು ಬಿ.ವಿ ಅವರು ನಿರ್ಮಿಸಿರುವ, ಕೆ.ಶಿವರುದ್ರಯ್ಯ ನಿರ್ದೇಶನದ ಹಾಗೂ ಪ್ರಕಾಶ್ ಬೆಳವಾಡಿ, ರಾಜೇಶ್ ನಟರಂಗ, ವೆಂಕಟೇಶ್ ಪ್ರಸಾದ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ "ಸಿಗ್ನಲ್ ಮ್ಯಾನ್ 1971" ಚಿತ್ರ ಆಗಸ್ಟ್ ನಲ್ಲಿ  ಬಿಡುಗಡೆಯಾಗಲಿದೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.
 
1971ರಲ್ಲಿ ನಡೆದ ಇಂಡೋ - ಪಾಕ್ ಕದನದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಅಳವಡಿಸಿಕೊಡಲಾಗಿದೆ. ಜೊತೆಗೆ ಯಾರು ಇಳಿಯದ, ಹತ್ತದ ರೈಲ್ವೆ ನಿಲ್ದಾಣದಲ್ಲಿ ಇಪ್ಪತ್ತು ವರ್ಷಗಳ ಕಾಲ ಕಾರ್ಯ ನಿರ್ವಹಿಸುವ "ಸಿಗ್ನಲ್ ಮ್ಯಾನ್" ಒಬ್ಬನ ಜೀವನದ ಕಥಯೂ ಇದರಲ್ಲಿದೆ‌. ಇಪ್ಪತ್ತು ವರ್ಷಗಳ ಕಾಲ ಜನಸಂಪರ್ಕವಿಲ್ಲದ ಸ್ಥಳದಲ್ಲಿದ್ದ ಈತ ಗೊಂದಲಕ್ಕೀಡಾಗುತ್ತಾನೆ. ಗೊಂದಲದಿಂದ ಆಚೆ ಬಂದ ನಂತರ ರಾಜ್ಯ ಹಾಗೂ ರಾಷ್ಟ್ರಕ್ಕೆ ಬೇಕಾಗುವ ವ್ಯಕ್ತಿಯಾಗುತ್ತಾನೆ. ಈ ಪಾತ್ರದಲ್ಲಿ ಪ್ರಕಾಶ್ ಬೆಳವಾಡಿ ಅಭಿನಯಿಸಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಊಟಿಯಲ್ಲಿ ಹಾಕಲಾಗಿದ್ದ ರೈಲ್ವೆ ನಿಲ್ದಾಣದ ಸೆಟ್ ನಲ್ಲೇ ನಡೆದಿದೆ. ಗಣೇಶ್ ಪ್ರಭು ಅವರ ನಿರ್ಮಾಣ, ಶೇಖರ್ ಚಂದ್ರು ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ, ಒಸೆಪಚ್ಚನ್ ಸಂಗೀತ ನಿರ್ದೇಶನ ಹಾಗೂ ಸಂತೋಷ್ ಪಾಂಚಾಲ್ ಕಲಾ ನಿರ್ದೇಶನ ಈ ಚತ್ರಕ್ಕಿದೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಚೆನ್ನೈ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಬಾಂಗ್ಲಾದೇಶದಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಅನೇಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಈ ಚಿತ್ರ ಪ್ರದರ್ಶನವಾಗಿದೆ ಎಂದರು ನಿರ್ದೇಶಕ ಕೆ.ಶಿವರುದ್ರಯ್ಯ.
 
ಇದು ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಮೊದಲ ಸಿನಿಮಾ ಎಂದು ಮಾತನಾಡಿದ ನಿರ್ಮಾಪಕ ಗಣೇಶ್ ಪ್ರಭು, ನಾನು ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಆಗಸ್ಟ್ ನಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ‌. ಬಂಗ್ಲಾದೇಶದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಾನು ಹೋಗಿದೆ.‌ ಆ ಚಿತ್ರೋತ್ಸವದಲ್ಲಿ ಬೆಸ್ಟ್ ಫ್ಯೂಚರ್ ಫಿಲ್ಮ್ ಪ್ರಶಸ್ತಿ ಬಂದಿದೆ. ಅಲ್ಲಿನ ಜನರು ನಮ್ಮ ಚಿತ್ರದ ಕುರಿತು ಆಡಿದ ಪ್ರೋತ್ಸಾಹಭರಿತ ಮಾತುಗಳನ್ನು ಕೇಳಿ ಖುಷಿಯಾಯಿತು ಎಂದರು.

ಚಿತ್ರದಲ್ಲಿ ನಟಿಸಿರುವ ರಾಜೇಶ್ ನಟರಂಗ , ಡಿಂಪಿ ಪದ್ಯ, ಛಾಯಾಗ್ರಾಹಕ ಶೇಖರ್ ಚಂದ್ರು ಹಾಗೂ ಕಾರ್ಯಕಾರಿ ನಿರ್ಮಾಪಕ, ನಟ ವೆಂಕಟೇಶ್ ಪ್ರಸಾದ್ ಚಿತ್ರದ ಕುರಿತು ಮಾತನಾಡಿದರು.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಆಗಸ್ಟ್ ನಲ್ಲಿ ತೆರೆಗೆ ಬರಲಿದೆ ``ಸಿಗ್ನಲ್ ಮ್ಯಾನ್ 1971`` ಚಿತ್ರ - Chitratara.com
Copyright 2009 chitratara.com Reproduction is forbidden unless authorized. All rights reserved.