Chief Editor
Manohar. R (Manu)
Photo Journalist
chitrataramanu@gmail.com
+91 9845549026
ಮಕ್ಕಳ ಸಾಹಸದ ಭಗವತಿ ಚಿತ್ರಕ್ಕೆ ಚಾಲನೆ
Posted date: 24 Wed, Jul 2024 09:38:13 AM
ಬಂಗಾರಿ, ಶಿವನಪಾದ ಸೇರಿದಂತೆ ಹಲವಾರು  ಚಿತ್ರಗಳನ್ನು ನಿರ್ದೇಶಿಸಿದ ಮಾಚಂದ್ರು ಅವರು ಕಥೆ ಚಿತ್ರಕಥೆ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿರುವ ಮಕ್ಕಳ ಸಾಹಸದ ಕಥೆ ಇರುವ ಮತ್ತೊಂದು ಚಿತ್ರ  ಭಗವತಿ. ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ವಿಜಯ ನಗರದ ಮಾರುತಿ  ಮಂದಿರದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ವಿದ್ಯಾಧರೆ ಸಿನಿಮಾಸ್ ಮೂಲಕ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದೆ.
 
ಈ ಹಿಂದೆ ಲೂಸ್ ಮಾದ ಯೋಗಿ, ರಾಗಿಣಿ ಅಭಿನಯದ ಬಂಗಾರಿ, ಬೆಟ್ಟದ ದಾರಿ, ನಡಗಲ್ಲು, ಶಿವನಪಾದ ಚಿತ್ರಗಳನ್ನು ನಿರ್ದೇಶಿಸಿದ್ದ ಮಾಚಂದ್ರು ಅವರು ಈ ಸಲ ಮಕ್ಕಳ ಸಾಹಸದ ಕಥಾನಕ‌ ಒಳಗೊಂಡ  ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 
 
ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಿಡಿದುನಿಂತ ಮಕ್ಕಳು  ಕಾನೂನಾತ್ಮಕವಾಗಿ ಹೋರಾಟ ನಡೆಸಿ ಗೆಲ್ಲುವಂಥ  ಮಕ್ಕಳ  ಸಾಹಸಮಯ ಕಾಥಾಹಂದರ ಈ ಚಿತ್ರದಲ್ಲಿದೆ. ಈಗಿನ ಜನರೇಶನ್ ಕುರಿತಾದ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರದಲ್ಲಿ ಮಕ್ಕಳು ಹೇಗೆ ಹೋರಾಡಿ ಗೆಲ್ಲುತ್ತಾರೆ ಎಂಬುದನ್ನು ನಿರ್ದೇಶಕರು ರೋಚಕ ಕಥೆಯೊಂದಿಗೆ ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ಒಟ್ಟು ಎರಡು ಹಾಡುಗಳಿದ್ದು, ರಾಜೇಶ್ ಗೌಡ ಕ್ಯಾಮೆರಾ ವರ್ಕ್ ನಿಭಾಯಿಸುತ್ತಿದ್ದಾರೆ.
 
ಆಗಸ್ಟ್ 5ರಿಂದ ಆರಂಭಿಸಿ ಬೆಂಗಳೂರು, ಕನಕಪುರ ಹಾಗೂ ಮಡಿಕೇರಿಯ ಸುತ್ತಮುತ್ತ ಭಗವತಿ ಚಿತ್ರದ ಚಿತ್ರೀಕರಣ ನಡೆಯಲಿದೆ. ಇನ್ನು ಈ ಚಿತ್ರದಲ್ಲಿ ಬಾಲ ಕಲಾವಿದರಾದ ರಿಷಿಕಾ ರಾಮ್, ದೀಪಕ್ ಪಿ.ಕೆ, ಅದ್ವೈತ್ ಪ್ರೇರಣ್, ಅದೇಶ್ ಪ್ರೇರಣ್, ಅಭಿನವ್ ಸಮರ್ಥ, ವೇದಾಂತ್, ಮೇಘನಾ, ಮಾನ್ವಿ, ರೋಶಿನಿ, ತೇಜಸ್, ಸುಷ್ಮಾ, ಶ್ವೇತಾ, ವಿಷ್ಣು, ಜಿ.ಡಿ. ಹೇರಂಭ , ಭಾನು, ಮೋಹನ್ ಕುಮಾರ್ ಡಿ.ಕೆ. ಸತೀಶ್, ಶರತ್, ಹರ್ಷ. ಮುಂತಾದವರು ಅಭಿನಯಿಸುತ್ತಿದ್ದಾರೆ. ಉಳಿದ ಕಲಾವಿದರ ಹಾಗೂ ತಾಂತ್ರಿಕ ವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಮಕ್ಕಳ ಸಾಹಸದ ಭಗವತಿ ಚಿತ್ರಕ್ಕೆ ಚಾಲನೆ - Chitratara.com
Copyright 2009 chitratara.com Reproduction is forbidden unless authorized. All rights reserved.