Chief Editor
Manohar. R (Manu)
Photo Journalist
chitrataramanu@gmail.com
+91 9845549026
``ಕ್ಯೂ(Q)``ನಾಗಶೇಖರ್ ನಿರ್ಮಾಣ- ನಿರ್ದೇಶನದ ಚಿತ್ರಕ್ಕೆ ಭಾಗ್ಯಶ್ರೀ(ಮೈನೆ ಪ್ಯಾರ್ ಕಿಯಾ) ಪುತ್ರಿ ಅವಂತಿಕಾ ದಸ್ಸಾನಿ ನಾಯಕಿ
Posted date: 13 Fri, Sep 2024 09:19:13 AM
ಈಗಾಗಲೇ ನಾಗಶೇಖರ್ ನಿರ್ದೇಶನದ `ಸಂಜು ವೆಡ್ಸ್ ಗೀತಾ` ಚಿತ್ರದ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಅದರ ಹಿಂದೆಯೇ ನಾಗಶೇಖರ್ ತಮ್ಮ ಮುಂದಿನ ಪ್ರಾಜೆಕ್ಟನ್ನು ಅನೌನ್ಸ್ ಮಾಡಿದ್ದಾರೆ. ಕನ್ನಡ, ತೆಲುಗು, ತಮಿಳು ಸೇರಿದಂತೆ ೩ ಭಾಷೆಗಳಲ್ಲಿ, ಬಿಗ್ ಬಜೆಟ್ ನಲ್ಲಿ  ನಿರ್ಮಾಣವಾಗುತ್ತಿರುವ ಆ ಚಿತ್ರದ ಹೆಸರು "ಕ್ಯೂ"(Q).
 
ತಮ್ಮದೇ ಆದ ನಾಗಶೇಖರ್ ಮ್ಯಾಜಿಕ್ಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುತ್ತಿರುವ ನಾಗಶೇಖರ್ ಕಥೆ, ಚಿತ್ರಕಥೆಯ ಜೊತೆಗೆ ಸಂಗೀತದ ಜವಾಬ್ದಾರಿಯನ್ನೂ ಸಹ ತಾವೇ  ಹೊತ್ತಿದ್ದಾರೆ. ರಾಮ್ ಚಿರು ಲೈನ್ ಪ್ರೊಡ್ಯೂಸರ್ ಆಗಿರುವ  ಈ ಚಿತ್ರವನ್ನು ಭಾವನಾ ರವಿ ಅವರು ಪ್ರೆಸೆಂಟ್ ಮಾಡುತ್ತಿದ್ದಾರೆ. 
 
ಈ ಚಿತ್ರದ ಮೂಲಕ ನಾಗಶೇಖರ್ ಅವರು, ಮೈನೆ ಪ್ಯಾರ್ ಕಿಯಾ ಖ್ಯಾತಿಯ ನಟಿ ಭಾಗ್ಯಶ್ರೀ ಅವರ ಪುತ್ರಿ ಅವಂತಿಕಾ ದಸ್ಸಾನಿ ಅವರನ್ನು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಉಪೇಂದ್ರ ಅಣ್ಣನ ಪುತ್ರ ನಿರಂಜನ್ ಚಿತ್ರದ ನಾಯಕ. ಮುಂದಿನ ತಿಂಗಳಿಂದ ಈ ಚಿತ್ರದ ಶೂಟಿಂಗ್ ಆರಂಭವಾಗಲಿದ್ದು, ಡಿ.ಜೆ. ಚಕ್ರವರ್ತಿ ಸಂಭಾಷಣೆ ರಚಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ``ಕ್ಯೂ(Q)``ನಾಗಶೇಖರ್ ನಿರ್ಮಾಣ- ನಿರ್ದೇಶನದ ಚಿತ್ರಕ್ಕೆ ಭಾಗ್ಯಶ್ರೀ(ಮೈನೆ ಪ್ಯಾರ್ ಕಿಯಾ) ಪುತ್ರಿ ಅವಂತಿಕಾ ದಸ್ಸಾನಿ ನಾಯಕಿ - Chitratara.com
Copyright 2009 chitratara.com Reproduction is forbidden unless authorized. All rights reserved.