Chief Editor
Manohar. R (Manu)
Photo Journalist
chitrataramanu@gmail.com
+91 9845549026
ಗಮನ ಸೆಳೆಯುತ್ತಿದೆ `ಟೆನೆಂಟ್` ಟೆನೆಂಟ್‌ಗೆ ಸಾಥ್ ನೀಡಿದ ಸ್ಯಾಂಡಲ್‌ವುಡ್ ಸ್ಟಾರ್ಸ್
Posted date: 16 Wed, Oct 2024 08:51:52 AM
ಟೆನೆಂಟ್, ಕನ್ನಡದಲ್ಲಿ ರಿಲೀಸ್‌ಗೆ ತಯಾರಿ ಮಾಡಿಕೊಂಡಿರುವ ಸಿನಿಮಾ. ಸದ್ಯ ಸಿನಿಮಾತಂಡ ಟೀಸರ್ ರಿಲೀಸ್ ಮಾಡುವ ಮೂಲಕ ಸಿನಿ ಅಭಿಮಾನಿಗಳ ಮುಂದೆ ಬಂದಿದೆ. ಈಗಾಗಲೇ ಶೂಟಿಂಗ್ ಮುಗಿಸಿರುವ ಟೆನೆಂಟ್ ಪ್ರಮೋಷನ್ ಅಂಗಳಕ್ಕೆ ಇಳಿದಿದೆ. ಅಂದಹಾಗೆ ಟೆನೆಂಟ್ ಸಿನಿಮಾದಲ್ಲಿ ದೊಡ್ಡ ತಾರಾಬಳಗವೆ ಇದೆ. ಸದ್ಯ ಬಿಗ್ ಬಾಸ್ ಮನೆಯೊಳಗೆ ಇರುವ ನಟ ಧರ್ಮಕೀರ್ತಿರಾಜ್ ಮತ್ತು ಉಗ್ರಂ ಮಂಜು ಹಾಗೂ ತಿಲಕ್, ರಾಕೇಶ್ ಮಯ್ಯ ಹಾಗೂ ಸೋನು ಗೌಡ ಪ್ರಮುಖ ಪಾತ್ರದಲ್ಲಿ ನಟಿಸಿರುವ ಸಿನಿಮಾವಿದು. ಈ ಸಿನಿಮಾಗೆ ಶ್ರೀಧರ್ ಶಾಸ್ತ್ರಿ ಆಕ್ಷನ್ ಕಟ್ ಹೇಳಿದ್ದಾರೆ. ನಿರ್ದೇಶಕ ಶ್ರೀಧರ್ ಅವರಿಗೆ ಇದು ಮೊದಲ ಸಿನಿಮಾ. ಯುವ ನಿರ್ದೇಶಕನ ಪ್ರಯತ್ನಕ್ಕೆ ತಾರಾಬಳಕ ಸಾಥ್ ಕೊಟ್ಟಿದೆ. ಸದ್ಯ ರಿಲೀಸ್ ಆಗಿರುವ ಟೀಸರ್ ನೋಡಿದ್ರೆ ಇದು ಚೊಚ್ಚಲ ಸಿನಿಮಾ ಅಂತ ಅನಿಸದ ಹಾಗೆ ಅಷ್ಟೆ ಅಚ್ಚುಕಟ್ಟಾಗಿ ಮಾಡಿದ್ದಾರೆ ನಿರ್ದೇಶಕರು. 

ಮಾಸ್ಟರ್ ಚಾಯ್ಸ್ ಕ್ರಿಯೇಶನ್ ನಡಿ ನಾಗರಾಜ್ ಟಿ ನಿರ್ಮಾಣ ಮಾಡಿರುವ ಟೆನಂಟ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಸದ್ಯ ಗಮನ ಸೆಳೆಯುತ್ತಿದೆ. ವಿಶೇಷ ಎಂದರೆ ಈ ಟೀಸರ್ ಅನ್ನು ಸ್ಯಾಂಡಲ್‌ವುಡ್‌ನ ಅನೇಕ ಗಣ್ಯರು ಸೇರಿ ರಿಲೀಸ್ ಮಾಡಿದ್ದಾರೆ. ನಿರ್ದೇಶಕರಾದ ಶಶಾಂಕ್, ಪವನ್  ಒಡೆಯರ್, ಖ್ಯಾತ ಛಾಯಾಗ್ರಹಕರಾದ ಸತ್ಯ ಹೆಗ್ಡೆ, ಡಿಸೈನರ್ ಹಾಗೂ ವಿತರಕಿ ಸಚಿನ್ನಾ ಹೆಗ್ಗಾರ್, ಚಂದನ್ ಶೆಟ್ಟಿ, ನಟ, ನಿರ್ಗೇಶಕ ವಿಕ್ಕಿ, ನಟ ನವೀಶ್ ಶಂಕರ್, ಸೇರಿದಂತೆ ಅನೇಕರು ರಿಲೀಸ್ ಮಾಡಿ ಸಿನಿಮಾತಂಡಕ್ಕೆ ಸಾಥ್ ನೀಡಿದ್ದಾರೆ.

ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಟೆನೆಂಟ್ ಸಿನಿಮಾದ ಟೀಸರ್ ಆಕರ್ಶಕವಾಗಿದ್ದು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. `ಕಣ್ ಕಣ್ಣ ಸಲಿಕೆ...` ಎಂದು ಲವರ್ ಬಾಯ್ ಆಗಿ ಮಿಂಚುತ್ತಿದ್ದ ನಟ ಧರ್ಮಕೀರ್ತಿರಾಜ್ ಈ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಮಿಂಚಿರುವುದು ವಿಶೇಷ. ಇನ್ನ ತಿಲಕ್ ರಾಜ್, ರಾಕೇಶ್ ಮಯ್ಯ ಹಾಗೂ ಸೋನು ಗೌಡ ವರ್ಷಗಳ ಬಳಿಕ ಮತ್ತೆ ತೆರೆಮೇಲೆ ಬರುತ್ತಿದ್ದಾರೆ. ಹಾಗಾಗಿಯೇ ಈ ಸಿನಿಮಾದ ಮೇಲೆ ಅವರಿಗೂ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ. ಟೀಸರ್ ನಲ್ಲಿ ಎಲ್ಲರ ಪಾತ್ರಗಳು ಸಹ ಗಮನ ಸೆಳೆಯುತ್ತಿದೆ. ಬ್ಯಾಗ್ರೌಂಡ್ ಸ್ಕೋರ್ ಟೀಸರ್‌ನ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. 

ಅಂದಹಾಗೆ ಚಿತ್ರಕ್ಕೆ ಗಿರೀಶ್ ಹೊತೂರ್ ಸಂಗೀತ ಸಂಯೊಜನೆ ಮಾಡಿದ್ದಾರೆ. ಉಜ್ವಲ್ ಸಂಕಲನ, ಮನೋಹರ್ ಛಾಯಾಗ್ರಹಣ ಚಿತ್ರಕ್ಕಿದೆ. ಈಗಾಗಲೇ ಟೀಸರ್ ಮೂಲಕ ಭಾರಿ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಿಸಿರುವ ಟೆನೆಂಟ್ ನವೆಂಬರ್ 22ಕ್ಕೆ ಅದ್ದೂರಿಯಾಗಿ ತೆರೆಗೆ ಬರುತ್ತಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಗಮನ ಸೆಳೆಯುತ್ತಿದೆ `ಟೆನೆಂಟ್` ಟೆನೆಂಟ್‌ಗೆ ಸಾಥ್ ನೀಡಿದ ಸ್ಯಾಂಡಲ್‌ವುಡ್ ಸ್ಟಾರ್ಸ್ - Chitratara.com
Copyright 2009 chitratara.com Reproduction is forbidden unless authorized. All rights reserved.