ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಹಾಗೂ ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ "ಯಲಾಕುನ್ನಿ" ಚಿತ್ರ ಈ ವಾರ ಅಕ್ಟೋಬರ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಕೋಮಲ್ ಕುಮಾರ್ ಅವರು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ. ಕೋಮಲ್ ಅವರು ಕನ್ನಡದ ಹೆಸರಾಂತ ನಟ ವಜ್ರಮುನಿ ಅವರ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ದೊಡ್ಡ ದೊಡ್ಡ ಕಲಾವಿದರ ದಂಡೆ ಈ ಚಿತ್ರದಲ್ಲಿದೆ. ದತ್ತಣ್ಣ , ಸಾಧು ಕೋಕಿಲ , ಮಿತ್ರ, ಸುಚೇಂದ್ರ ಪ್ರಸಾದ್ , ಶಿವರಾಜ್ ಕೆ ಆರ್ ಪೇಟೆ , ತಬಲಾ ನಾಣಿ, ರಾಜು ತಾಳಿ ಕೋಟೆ, ಸುಮನ್ ನಗರ ಕರ್, ಮಾನಸಿ ಸುಧೀರ್(ಕಾಂತಾರ) , ಜಗ್ಗೇಶ್ ಅವರ ದ್ವಿತಿಯ ಪುತ್ರ ಯತಿರಾಜ್ ಜಗ್ಗೇಶ್, ಜಯಸಿಂಹ ಮುಸುರಿ , ರಘು ರಾಮನಕೊಪ್ಪ ,ಮಹಾಂತೇಶ್, ಬೌಬೌ ಜಯರಾಮ್ , ನಿರ್ದೇಶಕ ಸಹನ ಮೂರ್ತಿ , ಭಜರಂಗಿ ಪ್ರಸನ್ನ , ತಿಥಿ ತಮ್ಮಣ್ಣ, ಪ್ರದೀಪ್ ಪೂಜಾರಿ, ತೇಜಸ್, ಉಮೇಶ್ ಸಕ್ಕರೆ ನಾಡು ಮಂತಾದರವರ ತಾರಾಬಳಗವಿರುವ ಈ ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ಗಿಚ್ಚಿಗಿಲಿಯ ಅಮೃತಾ ಬಣ್ಣ ಹಚ್ಚಿದ್ದಾರೆ.
ವಿಶೇಷವಾಗಿ ವಜ್ರಮುನಿ ಯವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕ ಪ್ರವೇಶಿಸುತ್ತಿದ್ದಾರೆ. ಮಯೂರ್ ಪಟೇಲ್ ಅವರು ಖಳ ನಾಯಕನಾಗಿ ನಟಿಸಿದ್ದಾರೆ.
ಸಂಪೂರ್ಣ ಹಳ್ಳಿ ಸೊಗಡಿನಲ್ಲಿ ಮೂಡಿಬಂದಿರುವ `ಯಲಾಕುನ್ನಿ` ಸಿನಿಮಾಕ್ಕೆ ರಥಾವರ ಖ್ಯಾತಿಯ ಧರ್ಮ ವಿಶ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಹಾಲೇಶ್ ಭದ್ರಾವತಿ ಅವರ ಛಾಯಾಗ್ರಹಣವಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿರುವ ಈ ಚಿತ್ರಕ್ಕೆ ನರಸಿಂಹ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ. "ಯಲಾಕುನ್ನಿ" ಚಿತ್ರಕ್ಕೆ `ಮೇರಾ ನಾಮ್ ವಜ್ರಮುನಿ` ಎಂಬ ಅಡಿಬರಹವಿದೆ.