ರೋರಿಂಗ್ ಸ್ಟಾರ್ ಶ್ರೀಮುರಳಿ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಶ್ರೀ, ಬರ್ತಡೇ ಪ್ರಯುಕ್ತ `ಪರಾಕ್` ಎಂಬ ಹೊಸ ಚಿತ್ರ ಘೋಷಣೆಯಾಗಿದೆ. ಒಂದು ಕೈಯಲ್ಲಿ ಗನ್ ಹಿಡಿದು ಬೆನ್ನು ತೋರಿಸ್ತಿರುವ ಶ್ರೀ, ಬೆನ್ನಿಗೆ ಪಿಸ್ತೂಲ್ ಹಾಕಿ ಪ್ರತ್ಯಕ್ಷರಾಗಿದ್ದಾರೆ.
ನವ ನಿರ್ದೇಶಕ ಹಾಲೇಶ್ ಕೋಗುಂಡಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಒಂದಷ್ಟು ಕಿರು ಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ ಹಾಲೇಶ್, ಪರಾಕ್ ಸಿನಿಮಾ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.
ಮಾರ್ಚ್ ನಲ್ಲಿ ಪರಾಕ್ ಚಿತ್ರದ ಶೂಟಿಂಗ್ ಶುರುವಾಗಲಿದೆ. ದೊಡ್ಡ ಬಜೆಟ್ , ದೊಡ್ಡ ತಾರಾಗಣದಲ್ಲಿ ಚಿತ್ರ ನಿರ್ಮಾಣ ಮಾಡಲು ಚಿತ್ರ ಸಜ್ಜಾಗುತ್ತಿದೆ. ಬ್ರ್ಯಾಂಡ್ ಸ್ಟುಡಿಯೋಸ್ ಬ್ಯಾನರ್ ನಡಿ ಪರಾಕ್ ಸಿನಿಮಾ ನಿರ್ಮಾಣವಾಗುತ್ತಿದೆ.