Chief Editor
Manohar. R (Manu)
Photo Journalist
chitrataramanu@gmail.com
+91 9845549026
ಪೃಥ್ವಿ-ಧನ್ಯ `ಚೌಕಿದಾರ್` ಸಿನಿಮಾದ ಚಿತ್ರೀಕರಣ ಮುಕ್ತಾಯ
Posted date: 25 Wed, Dec 2024 09:15:34 AM
`ದಿಯಾ` ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್‌ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಚೌಕಿದಾರ್ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ ನಿನ್ನೆ ಚಿತ್ರಕ್ಕೆ ಕುಂಬಳಕಾಯಿ ಹೊಡೆಲಾಯಿತು‌. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು. ಬಳಿಕ ಸುದ್ದಿ ಗೋಷ್ಠಿಯಲ್ಲಿ ಚೌಕಿದಾರ್ ಕಲಾವಿದರು ತಮ್ಮ ಶೂಟಿಂಗ್ ಅನುಭವ ಹಂಚಿಕೊಂಡರು.
 
ನಾಯಕ ಪೃಥ್ವಿ ಅಂಬಾರ್ ಮಾತನಾಡಿ, ಈ ಚಿತ್ರದಿಂದ ಬಹಳಷ್ಟು ಕಲಿಯಲು ಸಿಕ್ಕಿದೆ. ನುರಿತ ನಿರ್ದೇಶಕರು ಇದ್ದಾಗ ಹೇಗೆ ಬೇಕು ಯಾವ ರೀತಿ ಬೇಕು ಅನ್ನೋದನ್ನು ಅವರು ಹೇಳಿಕೊಟ್ಟಿದ್ದಾರೆ. ಮನುಷ್ಯನ ಭಾವನೆಗಳನ್ನು ತುಂಬಾ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ಫ್ಯಾಮಿಲಿ ಎಮೋಷನ್ ತುಂಬಾ ಚೆನ್ನಾಗಿ ಅಳವಡಿಸಿದ್ದಾರೆ. ಸಾಯಿ ಸರ್ ಸೆಟ್ ನಲ್ಲಿ ಇದ್ದ ರೀತಿ. ನಮ್ಮಂತಹ ಕಲಾವಿದರಿಗೆ ಪುಸ್ತಕ ಇದ್ದಂತೆ. ನಿರ್ಮಾಪಕ ಜರ್ನಿ ನನಗೆ ಸ್ಫೂರ್ತಿ ಎಂದು ತಿಳಿಸಿದರು.
 
ನಿರ್ದೇಶಕ‌ ಚಂದ್ರಶೇಖರ್ ಬಂಡಿಯಪ್ಪ ಮಾತನಾಡಿ, ನಾವು ನಿರ್ದೇಶಕರಾಗಿ ನಿರ್ಮಾಪಕರ ನಂಬಿಕೆ ಉಳಿಸಿಕೊಳ್ಳಬೇಕು. ನಿರ್ಮಾಪಕರಿಗೆ ಪ್ರೊಫೆಷನಲಿಸಂ ಇದೆ. ಇಡೀ ಕಲಾವಿದರು ಅತ್ಯದ್ಭುತವಾಗಿ ಅಭಿನಯಿಸಿದ್ದಾರೆ. ಮೇ ತಿಂಗಳ ಹಿಂದೆ ಮುಂದೆ ಸಿನಿಮಾ ರಿಲೀಸ್ ಮಾಡಲು ಪ್ಲ್ಯಾನ್ ಮಾಡುತ್ತಿದ್ದೇವೆ. ಸಂಕ್ರಾಂತಿಗೆ ಟೀಸರ್ ರಿಲೀಸ್ ಮಾಡುತ್ತೇವೆ. ನಾಲ್ಕು ಹಾಡುಗಳಿವೆ.  ಪ್ರತಿಯೊಬ್ಬ ಮನೆಯಲ್ಲಿಯೂ ಚೌಕಿದಾರ್ ಇರುತ್ತಾರೆ ಅವರ ಕಥೆಯನ್ನು ನಾವು ಹೇಳಿದ್ದೇವೆ. ಗ್ರಾಮಾಂತರ ಪ್ರದೇಶದಿಂದಲೇ ಚಿತ್ರ ಶುರುವಾಗುತ್ತದೆ. ಸಾಯಿ ಕುಮಾರ್ ಸರ್ ಹಾಗೂ ಪೃಥ್ವಿ ತಂದೆ ಮಗನಾಗಿ ನಟಿಸಿದ್ದಾರೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಚಿತ್ರ ಏಕಕಾಲದಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.
 
ನಾಯಕಿ ಧನ್ಯ ರಾಮ್ ಕುಮಾರ್ ಮಾತನಾಡಿ, ಚೌಕಿದಾರ್ ಶೂಟಿಂಗ್ ಮುಗಿದಿದೆ. ಈ ಚಿತ್ರದಲ್ಲಿ ಪಾತ್ರ ಸಿಕ್ಕಿರುವುದು ಖುಷಿ ಜೊತೆಗೆ ಹೆಮ್ಮೆ ಇದೆ. ಈ ಸಿನಿಮಾದಿಂದ ನನಗೆ ಕಲಿಯುವುದು ತುಂಬಾನೇ ಸಿಕ್ತು. ಜರ್ನಿ ಚಾಲೆಂಜಿಂಗ್ ಆಗಿತ್ತು. ಈ ಚಿತ್ರದ ಮೂಲಕ ಒಳ್ಳೆ ನಟಿಯಾಗಿ ಬಂದಿದ್ದೇನೆ ಎನಿಸಿತು. ಸಾಯಿಕುಮಾರ್ ಸರ್, ಧರ್ಮ ಸರ್, ಸುಧಾ ರಾಣಿ ಮೇಡಂ, ಶ್ವೇತಾ ಮೇಡಂ, ಪೃಥ್ವಿ ಇವರ ಜೊತೆ ಕೆಲಸ ಮಾಡಿರುವುದು ಖುಷಿಯಾಗಿದೆ. ನಿರ್ಮಾಪಕರು ನಮ್ಮನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ ಎಂದರು.
 
ಹಿರಿಯ ನಟ ಸಾಯಿಕುಮಾರ್ ಮಾತನಾಡಿ, ನನ್ನ ಜೀವನದಲ್ಲಿ ಇದೇ ಮೊದಲ ಬಾರಿಗೆ ಇದೇ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದ್ದು , ಕುಂಬಳಕಾಯಿ ಕೂಡ ಇಲ್ಲೇ ಹೊಡೆಯಲಾಗಿದೆ. ಯಾವ ಸಿನಿಮಾಗೂ ಇದು ಆಗಿಲ್ಲ. ಮಹಾನ್ ಕಾಳಿ ಆಶೀರ್ವಾದ ನಮ್ಮ‌ ಚಿತ್ರಕ್ಕಿದೆ ಅನ್ನುವುದು ಗೊತ್ತಾಗುತ್ತಿದೆ. ಚೌಕಿದಾರ್ ಸಿನಿಮಾದಲ್ಲಿ ಒಂದೊಳ್ಳೆ ಕಲಾವಿದರು ಹಾಗೂ ತಂತ್ರಜ್ಞಾನರ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ಎಲ್ಲಾ ಕಲಾವಿದರು ಅದ್ಭುತವಾಗಿ ನಟಿಸಿದ್ದಾರೆ. ಇದೊಂದು ಫ್ಯಾಮಿಲಿ ಡ್ರಾಮಾ, ಎಮೋಷನಲ್ ಡ್ರಾಮಾ. ತೆಲುಗಿನಲ್ಲಿ ಹ್ಯಾಟ್ರಿಕ್ ಕೊಟ್ಟೆ. ಸರಿಪೋದ ಶನಿವಾರ, ಲಕ್ಕಿ ಭಾಸ್ಕರ್ ನೂರು ಕೋಟಿ ಕೊಟ್ಟಿವೆ. ಮುಂದಿನ ವರ್ಷ ಕನ್ನಡದಲ್ಲಿ ಹ್ಯಾಟ್ರಿಕ್ ಆಗಲಿ ಎಂದು ತಿಳಿಸಿದರು.
 
ರಥಾವರ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ `ಚೌಕಿದಾರ್`ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, `ಡೈಲಾಗ್ ಕಿಂಗ್` ಸಾಯಿಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪೃಥ್ವಿ ಅಂಬಾರ್, ಧನ್ಯಾ ರಾಮ್‌ಕುಮಾರ್ ಹಾಗೂ ಸಾಯಿಕುಮಾರ್ ಕಾಂಬಿನೇಷನ್ ಸಿನಿಪ್ರಿಯರಿಗೆ ಗಮನವನ್ನಂತೂ ಸೆಳೆದಿದೆ. ಶ್ವೇತಾ, ಸುಧಾರಾಣಿ, ಧರ್ಮ ಸೇರಿದಂತೆ ಮತ್ತಿತರ ತಾರಾಬಳಗ ಚಿತ್ರದಲ್ಲಿದೆ.
 
`ಚೌಕಿದಾರ್` ಸಿನಿಮಾವನ್ನು ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ. ಸಚಿನ್‌ ಬಸ್ರೂರು ಸಂಗೀತವಿದ್ರೆ, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ, ಸಂತೋಷ್ ನಾಯಕ್ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ, ರವಿ ವರ್ಮಾ ಸಾಹಸ ನಿರ್ದೇಶನ ಸಿನಿಮಾಗಿದೆ. `ಚೌಕಿದಾರ್` ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಲವರ್‌ ಬಾಯ್‌ ಆಗಿದ್ದ ಪೃಥ್ವಿ ಅಂಬಾರ್ ಮಾಸ್ ಲುಕ್ ಕೊಡಲಿದ್ದಾರೆ. ಪೃಥ್ವಿರಾಜ್ ಧಘಾರಿ ಸಹ ನಿರ್ದೇಶನದಲ್ಲಿ ಚೌಕಿದಾರ್ ಚಿತ್ರ ಮೂಡಿ ಬಂದಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಪೃಥ್ವಿ-ಧನ್ಯ `ಚೌಕಿದಾರ್` ಸಿನಿಮಾದ ಚಿತ್ರೀಕರಣ ಮುಕ್ತಾಯ - Chitratara.com
Copyright 2009 chitratara.com Reproduction is forbidden unless authorized. All rights reserved.