Chief Editor
Manohar. R (Manu)
Photo Journalist
chitrataramanu@gmail.com
+91 9845549026
ಅಮ್ಮ- ಮಗಳ ಬಾಂಧವ್ಯದ ಮೇಲೆ ಸೇಡಿನ ಕಾಡ್ಗಿಚ್ಚು: ಬರ್ತಿದೆ ಹೊಚ್ಚಹೊಸ ಧಾರಾವಾಹಿ `ನಾ ನಿನ್ನ ಬಿಡಲಾರೆ`
Posted date: 27 Mon, Jan 2025 � 02:58:22 PM
ವಿಭಿನ್ನವಾದ ಧಾರಾವಾಹಿಗಳು, ವಿನೋದಮಯವಾದ ಗೇಮ್ ಶೋ ಗಳಿಂದ ಜನರ ಮನಗೆದ್ದು ಮನರಂಜನೆಯ ಮಹಾರಾಜ ಎಂದು ಖ್ಯಾತಿ ಪಡೆದ ವಾಹಿನಿ ಜೀ಼ ಕನ್ನಡ. ಈಗ  ಜೀ಼ ಕನ್ನಡ ವಾಹಿನಿ ಪ್ರೀತಿಯ ವೀಕ್ಷಕರನ್ನು ಮನರಂಜಿಸಲು ಮತ್ತೊಂದು ಅಮೋಘ ಧಾರಾವಾಹಿಯನ್ನು ಹೊತ್ತುತರಲಿದೆ. `ನಾ ನಿನ್ನ ಬಿಡಲಾರೆ` ಎಂಬ ಶೀರ್ಷಿಕೆಯುಳ್ಳ ಈ ಧಾರಾವಾಹಿಯು ಥ್ರಿಲ್ಲರ್, ಹಾರರ್ ಮತ್ತು ಅಮ್ಮ-ಮಗಳ ಬಾಂಧವ್ಯಕ್ಕೆ ಒತ್ತು ಕೊಟ್ಟಿರುವುದರಿಂದ ಎಲ್ಲಾ ವಯೋಮಿತಿಯ ಜನರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿ ಆಗಲಿದೆ ಎಂದರೆ ತಪ್ಪಾಗಲ್ಲ. 
 
`ನಾ ನಿನ್ನ ಬಿಡಲಾರೆ` ಧಾರಾವಾಹಿಯ ಮೊದಲ ಪ್ರೊಮೊವನ್ನು ವಾಹಿನಿಯು ವೀಕ್ಷಕರಿಗೆ ತಲುಪಿಸಿದ್ದು. ಅದು ಕನ್ನಡಿಗರ ಮನಗೆದ್ದಿದೆ. ಸಿನೆಮಾಟೋಗ್ರಫಿ, ನಿರ್ದೇಶನ, ತಂಡದ ನಟನೆ ಬಗ್ಗೆ ಪ್ರೇಕ್ಷಕರು ಅತಿಯಾದ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಜೀ಼ ಕನ್ನಡ ವಾಹಿನಿಯು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪ್ರೊಮೊದ ತೆರೆಯ ಹಿಂದಿನ ಝಲಕ್ ನ ಸಣ್ಣ ತುಣುಕನ್ನು ಬಿಟ್ಟಿರೋದರಿಂದ ಧಾರಾವಾಹಿ ಹೇಗೆ ಬಂದಿದೆ ಎಂದು ನೋಡುವ ಪ್ರೇಕ್ಷಕರ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.
 
ಇನ್ನು, ವರ್ಷಗಳ ಬಳಿಕ ವಿಕ್ರಾಂತ್ ರೋಣ ನಟಿ ನೀತಾ ಅಶೋಕ್ ಕಿರುತರೆಗೆ ಮರಳಿ ಬರುತ್ತಿರುವುದು ಅವರ ಅಭಿಮಾನಿಗಳಿಗೆ ಹರುಷ ತಂದಿದೆ. ಪಾರು ಧಾರಾವಾಹಿಯ ಶರತ್ ಪದ್ಮನಾಭ್ ನೀತಾ ಅಶೋಕ್ ಅವರಿಗೆ ಜೋಡಿಯಾಗಿ ನಟಿಸಲಿದ್ದು ಈ ಹೊಸ ಜೋಡಿ ಯಾವ ರೀತಿ ಮೋಡಿ ಮಾಡಲಿದೆ ಎಂದು ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ. ಸೋಶಿಯಲ್ ಮೀಡಿಯಾ ದಲ್ಲಿ ಸಕ್ಕತ್ ಸದ್ದು ಮಾಡುತ್ತಿರುವ ಚೂಟಿ ಬೇಬಿ ಮಹಿತಾ ಈ ಜೋಡಿಗೆ ಮಗಳಾಗಿ ನಟಿಸಲಿದ್ದಾಳೆ. ಹಿರಿಯ ನಟಿ ವೀಣಾ ಸುಂದರ್ ಕುಟುಂಬದ ಯಜಮಾನಿಯ ಪಾತ್ರವನ್ನು ನಿರ್ವಹಿಸಲಿದ್ದಾರೆ. ಹಲವಾರು ಧಾರಾವಾಹಿಗಳಲ್ಲಿ ನಟಿಸಿರುವ ರಿಷಿಕಾ ಅವರು ಈ ಧಾರಾವಾಹಿಯ ಮತ್ತೋರ್ವ ನಾಯಕನಟಿ. ಇನ್ನು ತುಂಬಾ ವರ್ಷಗಳ ಬಳಿಕ ಹಿರಿಯ ನಟ, ರಂಗಭೂಮಿ ಕಲಾವಿದ ಬಾಬು ಹಿರಣ್ಣಯ್ಯ ಅವರು ಮತ್ತೆ ಕಿರುತೆರೆಗೆ ಮರಳಿದ್ದಾರೆ. ಈ ಧಾರಾವಾಹಿಯಲ್ಲಿ ಅವರು ಒಂದು ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ. ತನ್ನ ವಿಭಿನ್ನ ನಟನೆಯಿಂದ ತನ್ನದೇ ಆದ ಅಭಿಮಾನಿ ಬಳಗ ಹೊಂದಿರುವ ರುಹಾನಿ ಶೆಟ್ಟಿ ಅವರು ಈ ಧಾರಾವಾಹಿಯಲ್ಲಿ ಖಳನಾಯಕಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಕನ್ನಡದ ಕಿರುತೆರೆಯಲ್ಲಿ ಬೇಡಿಕೆಯ ಖಳನಾಯಕಿ ಆಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಇಷ್ಟೇ ಅಲ್ಲದೇ, ಇನ್ನೂ ಅನೇಕ ಹಿರಿಯ ಮತ್ತು ದಿಗ್ಗಜ ಕಲಾವಿದರುಗಳು ಈ ಧಾರಾವಾಹಿಯ ಭಾಗವಾಗಿದ್ದಾರೆ. ಜಯದುರ್ಗ ಕ್ರಿಯೇಷನ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ಈ ಧಾರಾವಾಹಿಯ ನಿರ್ದೇಶನದ ಜವಾಬ್ದಾರಿಯನ್ನು ಸತೀಶ್ ಕೃಷ್ಣವರು ಹೊತ್ತಿದ್ದಾರೆ.
 
ಶರತ್-ಅಂಬಿಕಾ ದಂಪತಿಗೆ ಮಗಳು ಹಿತಾನೇ ಪ್ರಪಂಚ.  ಆದರೆ ಈ ಪುಟ್ಟ ಸಂಸಾರಕ್ಕೆ ಮಾಯಾ ಎಂಬ ಹೆಣ್ಣಿನ ಕೆಟ್ಟ ದೃಷ್ಟಿ ಬೀಳುತ್ತದೆ. ಶರತ್ ನನ್ನು ತನ್ನವನನ್ನಾಗಿಸಿಕೊಳ್ಳಬೇಕೆಂಬ ದುರಾಸೆಗೆ ಬಿದ್ದ ಮಾಯಾ ಅಂಬಿಕಾಳನ್ನು ಸಾಯಿಸುತ್ತಾಳೆ. ಇತ್ತ ಮಗಳು ಹಿತ ಅಮ್ಮನಿಲ್ಲದೆ ಅನಾಥಳಾಗಿ ಅಪ್ಪನ ಮೇಲೆ ಮುನಿಸಿಕೊಂಡು ಮಾತನ್ನು ಬಿಡುತ್ತಾಳೆ. ತನ್ನ ದಾರಿಗೆ ಹಿತ ಅಡ್ಡವಾಗಿದ್ದಾಳೆ ಎಂದು ಆ ಪುಟ್ಟ ಕೂಸನ್ನು ಮುಗಿಸಲು ಮಾಯಾ ಸಂಚು ರೂಪಿಸುತ್ತಾಳೆ. ತನ್ನ ಮಗಳಿಗೆ ತೊಂದರೆ ಇದೆ ಎಂದು ಗೊತ್ತಾದ ಅಂಬಿಕಾ ಸತ್ತು ಹೋಗಿದ್ದರೂ ಮತ್ತೆ ಹೇಗೆ ಮರಳಿ ಬಂದು ಮಗಳನ್ನು ರಕ್ಷಿಸುತ್ತಾಳೆ ಎಂಬುದೇ ಇಲ್ಲಿ ಕುತೂಹಲ ಮೂಡಿಸುವ ವಿಷಯ. ಮತ್ತೊಂದೆಡೆ ಅಕ್ಕನನ್ನು ಕಳೆದುಕೊಂಡ ತಂಗಿ ಅಕ್ಕನ ಪ್ರೀತಿಗಾಗಿ ಪರಿತಪಿಸುತ್ತಾಳೆ. ಆದರೆ ಆಕೆಗೆ ಮತ್ತೆ ಅಕ್ಕ ಸಿಗ್ತಾಳಾ ಎನ್ನುವುದು ಮತ್ತೊಂದು ಪ್ರಮುಖ ಅಂಶ. ಒಂದೆಡೆ ಅಕ್ಕನ ಕುಟುಂಬ ಅಲ್ಲೋಲ ಕಲ್ಲೋಲ ಆದರೆ ಮತ್ತೊಂದೆಡೆ ತಂಗಿ ದೇವರ ಮೇಲಿನ ನಂಬಿಕೆಯನ್ನೇ ಕಳೆದುಕೊಳ್ಳುತ್ತಾಳೆ. ಈ ಅಕ್ಕ-ತಂಗಿಯ ಬದುಕು ಮತ್ತೆ ಸರಿಹೊಗೋದು ಹೇಗೆ? ಅಮ್ಮ ಮಗಳನ್ನು ಕೆಟ್ಟ ಹೆಂಗಸಿನ ಮಾಯೆಯಿಂದ ಹೇಗೆ ಕಾಪಾಡಿಕೊಳ್ತಾಳೆ? ಅಪ್ಪನ ಮೇಲಿನ ಮಗಳ ಕೋಪ ಯಾವಾಗ ಕಡಿಮೆ ಆಗುತ್ತೆ? ಇವೆಲ್ಲದರ ಸುತ್ತ ನಡೆಯುವ ಕಥೆಯೇ `ನಾ ನಿನ್ನ ಬಿಡಲಾರೆ` !
 
ಅಮ್ಮ ಮಗಳನ್ನು ಹೇಗೆ ಕಾಪಾಡುತ್ತಾಳೆ? ಅನಾಥ ಮಗುವಿಗೆ ಮತ್ತೆ ಅಮ್ಮನ ಮಮತೆ ಸಿಗುತ್ತಾ? ಅಪ್ಪನ ಮೇಲಿನ ಮಗಳ ಮುನಿಸು ಕಡಿಮೆ ಆಗುತ್ತಾ? ಇವೆಲ್ಲದಕ್ಕೂ ಉತ್ತರ ಸಿಗಬೇಕು ಅಂದ್ರೆ ವೀಕ್ಷಿಸಿ `ನಾ ನಿನ್ನ ಬಿಡಲಾರೆ` ಇದೇ ಜನವರಿ 27 ರಿಂದ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30 ಕ್ಕೆ ನಿಮ್ಮ ಜೀ಼ ಕನ್ನಡ ವಾಹಿನಿಯಲ್ಲಿ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಅಮ್ಮ- ಮಗಳ ಬಾಂಧವ್ಯದ ಮೇಲೆ ಸೇಡಿನ ಕಾಡ್ಗಿಚ್ಚು: ಬರ್ತಿದೆ ಹೊಚ್ಚಹೊಸ ಧಾರಾವಾಹಿ `ನಾ ನಿನ್ನ ಬಿಡಲಾರೆ` - Chitratara.com
Copyright 2009 chitratara.com Reproduction is forbidden unless authorized. All rights reserved.