"ಶಂಭೋ ಶಿವ ಶಂಕರ" ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ - ನಾಯಕಿಯಾಗಿ ನಟಿಸಿರುವ "ಬಿಂಗೊ" ಚಿತ್ರದ ಆಡಿಯೋ ರೈಟ್ಸ್ A2 music ಸಂಸ್ಥೆಗೆ ಉತ್ತಮ ಮೊತ್ತಕ್ಕೆ ಮಾರಾಟವಾಗಿದೆ. ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳನ್ನು ಅದ್ದೂರಿಯಾಗಿ ಅನಾವರಣ ಮಾಡಲು ಚಿತ್ರತಂಡ ಸಿದ್ದತೆ ನಡೆಸಿದೆ. ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಸಹ ಮುಕ್ತಾಯವಾಗಿದ್ದು, ಚಿತ್ರ ತೆರೆಗೆ ಬರುವ ಹಂತ ತಲುಪಿದೆ.
ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ , ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿ udv ಸಂಕಲನ "ಬಿಂಗೊ" ಚಿತ್ರಕ್ಕಿದೆ.