ರಾಜ್ಯದ ಮಲ್ಟಿಪ್ಲೆಕ್ಸ್ಗಳೂ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರವನ್ನು 200 ರೂ.ಗಳಿಗೆ ಸೀಮಿತಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಮೂಲಕ ಮಲ್ಟಿಫ್ಲೆಕ್ಸ್ ಚಿತ್ರಮಂದಿರದ ದರ ಏರಿಕೆಗೆ ಕಡಿವಾಣ ಹಾಕಲು ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ.
2025-26ನೇ ಸಾಲಿನ ಮುಂಗಡ ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯ ಪ್ರಕಟಿಸಿದ್ಧಾರೆ. ಚಿತ್ರರಂಗಕ್ಕೆ ಪೂರಕವಾದ ಹಲವು ಕ್ರಮಗಳನ್ನು ರಾಜ್ಯ ಬಜೆಟ್ನಲ್ಲಿ ಪ್ರಕಟಿಸಿದ್ದಾರೆ.
ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಸಾರ್ವಜನಿಕ- ಖಾಸಗೀ ಸಹಬಾಗಿತ್ವದಲ್ಲಿ ಅಂದಾಜು 500 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಚಿತ್ರನಗರಿಯನ್ನು ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯಗಳನ್ನು ನಮ್ಮ ಸರ್ಕಾರವು ಸಿನಿಮಾ ಕ್ಷೇತ್ರಕ್ಕೆ ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಚಲನಚಿತ್ರ ಅಕಾಡೆಮಿಯು ಹೊಂದಿರುವ 2.5 ಎಕರೆ ನಿವೇಶನದಲ್ಲಿ ಬಹುಪರದೆಗಳಿರುವ ಚಿತ್ರಮಂದಿರ ಸಮುಚ್ಛಯವನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ತಮ್ಮ ಮುಂಗಡ ಪತ್ರದಲ್ಲಿ ಪ್ರಕಟಿಸಿದ್ದಾರೆ.
ಸಾಮಾಜಿಕ, ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್-ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು 3 ಕೋಟಿ ರೂ. ವೆಚ್ಚದಲ್ಲಿ ಚಲನಚಿತ್ರ ಭಂಡಾರವನ್ನು ಸ್ಥಾಪಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.
ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ ಒಟಿಸಿ ವೇದಿಕೆಯನ್ನು ಸೃಜಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದು ಚಿತ್ರರಂಗದ ಮಂದಿಗೆ ಅನುಕೂಲವಾಗುವ ಸಾಧ್ಯತೆ ಇದೆ.
ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಅನುಷ್ಠಾನಗೊಳಿಸಲಾಗುವುದು. ಯೋಜನೆ ಪ್ರಕಟಿಸಿದ್ದಾರೆ.
ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಪ್ರಸ್ತುತ ನೀಡುತ್ತಿರುವ 12,000 ರೂ. ಮಾಸಾಶನವನ್ನು 15,000 ರೂ.ಗಳಿಗೆ ಹಾಗೂ ಕುಟುಂಬ
ಮಾಸಾಶನವನ್ನು 6,000 ರೂ.ಗಳಿಂದ 7,500 ಹೆಚ್ಚಿಸಲಾಗುವುದು. ರೂ.ಗಳಿಗೆ ಹೆಚ್ಚಿಸುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.