Chief Editor
Manohar. R (Manu)
Photo Journalist
chitrataramanu@gmail.com
+91 9845549026
``ವರ್ಣವೇದಂ`` ಚಿತ್ರಕ್ಕಾಗಿ ``ಓ ವೇದ ಓ ವೇದ``ಎಂದು ರೊಮ್ಯಾಂಟಿಕ್ ಹಾಡು ಹಾಡಿದ ಖ್ಯಾತ ಸೋನು ನಿಗಂ
Posted date: 10 Thu, Apr 2025 02:43:21 PM
ತಮ್ಮ ಅಮೋಘ ಕಂಠಸಿರಿಯಿಂದ ವಿಶ್ವದಾದ್ಯಂತ ಹೆಸರು ಮಾಡಿರುವ ಜನಪ್ರಿಯ ಗಾಯಕ ಸೋನು ನಿಗಂ, "ನಾನು ಮತ್ತು ಗುಂಡ" ಚಿತ್ರದ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ "ವರ್ಣವೇದಂ"‌ ಚಿತ್ರಕ್ಕಾಗಿ " ಓ ವೇದ ಓ ವೇದ" ಎಂಬ ಸುಂದರ ರೊಮ್ಯಾಂಟಿಕ್ ಹಾಡು ಹಾಡಿದ್ದಾರೆ.  ಗಗನ್ ಭಡೇರಿಯಾ ಸಂಗೀತ ನೀಡಿರುವ ಈ ಹಾಡನ್ನು ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಅವರೆ ಬರೆದಿದ್ದಾರೆ. ಇತ್ತೀಚಿಗೆ ಈ ಹಾಡಿನ ಧ್ವನಿಮುದ್ರಣ ನಡೆದಿದ್ದು, ಸದ್ಯದಲ್ಲೇ ಚಿತ್ರೀಕರಣವಾಗಲಿದೆ. ಭೂಷಣ್ ನೃತ್ಯ ನಿರ್ದೇಶನ ಮಾಡಲಿದ್ದಾರೆ.
 
ಶ್ರೀನಿವಾಸ್ ತಿಮ್ಮಯ್ಯ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ  ಭೀಮೇಶ್, ಚಂದ್ರಶೇಖರ್, ವಿಶ್ವನಾಥ್, ಶೈಜು ಹಾಗೂ ರಾಜೇಶ್ ಗೋಸ್ವಾಮಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕಲರ್ ಮಾಫಿಯಾ ಕುರಿತಾದ ಕಥಾಹಂದರ ಹೊಂದಿರುವ ಕಾರಣ ಈ ಚಿತ್ರಕ್ಕೆ "ವರ್ಣವೇದಂ" ಎಂದು ಶೀರ್ಷಿಕೆ ಇಡಲಾಗಿದೆ ಎಂದು ತಿಳಿಸಿರುವ ನಿರ್ದೇಶಕರು ಚಿತ್ರದಲ್ಲಿ ನಾಯಕಿಯ ಹೆಸರು ವರ್ಣ ಹಾಗೂ ನಾಯಕನ ಹೆಸರು ವೇದ ಎಂದು ಹೇಳಿದ್ದಾರೆ‌. ನೈಋತ್ಯ ಹಾಗೂ ಪ್ರತೀಕ್ಷ ಈ ಚಿತ್ರದ ನಾಯಕ ನಾಯಕಿಯಾಗಿ ನಟಿಸುತ್ತಿದ್ದಾರೆ. 
ಹೆಸರಾಂತ ಕಲಾವಿದರ ತಾರಾಬಳಗವಿರುವ "ವರ್ಣವೇದಂ" ಚಿತ್ರಕ್ಕೆ ಚಿದಾನಂದ್ ಅವರ ಛಾಯಾಗ್ರಹಣವಿದೆ.
 
ಗಗನ್ ಭಡೇರಿಯಾ ಸಂಗೀತ ಸಂಯೋನೆಯಲ್ಲಿ ಆರು ಸುಮಧುರ ಹಾಡುಗಳು ಚಿತ್ರದಲ್ಲಿದ್ದು, ಸೋನು ನಿಗಂ ಸೇರಿದಂತೆ ಜನಪ್ರಿಯ ಗಾಯಕರು ಈ ಹಾಡುಗಳಿಗೆ ಧ್ವನಿ ನೀಡಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ``ವರ್ಣವೇದಂ`` ಚಿತ್ರಕ್ಕಾಗಿ ``ಓ ವೇದ ಓ ವೇದ``ಎಂದು ರೊಮ್ಯಾಂಟಿಕ್ ಹಾಡು ಹಾಡಿದ ಖ್ಯಾತ ಸೋನು ನಿಗಂ - Chitratara.com
Copyright 2009 chitratara.com Reproduction is forbidden unless authorized. All rights reserved.