ಚಂದನವನದ ಹಿರಿಯ ನಟ ಬ್ಯಾಂಕ್ ಜನಾರ್ಧನ್(76) ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ರಾತ್ರಿ 2.30ಕ್ಕೆ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಉಪೇಂದ್ರ ನಿರ್ದೇಶನದ `ಶ್` `ತರ್ಲೆ ನನ್ ಮಗ` ಹಾಗೂ `ಕೌರವ` ಬೆಳ್ಳಿಯಪ್ಪ ಬಂಗಾರಪ್ಪ , ಗಣೇಶ ಸುಬ್ರಹ್ಮಣ್ಯ ಸೇರಿದಂತೆ ಹಲವು ಸಿನಿಮಾಗಳಲ್ಲಿ ಗಮನ ಸೆಳೆದಿದ್ದಾರೆ. ಪಾಪಪಾಂಡು, ಮಾಂಗಲ್ಯ, ರೋಬೋ ಫ್ಯಾಮಿಲಿ, ಜೋಕಾಲಿ ಧಾರಾವಾಹಿಗಳಲ್ಲೂ ನಟಿಸಿದ್ದಾರೆ.
ಚಿತ್ರರಂಗಕ್ಕೆ ಪಾದಾರ್ಪನೆ ಮಾಡಿದ ಸಂದರ್ಭದಲ್ಲಿ ನಟ ಜಗ್ಗೇಶ್ ಜತೆ ಬ್ಯಾಂಕ್ ಜನಾರ್ಧನ್ ಹೆಚ್ಚು ಕಾಲ ಕಳೆದಿದ್ದರು. ಜಗ್ಗೇಶ್ ಬಹುತೇಕ ಚಿತ್ರಗಳಲ್ಲಿ ನಟಿಸಿರುವ ಬ್ಯಾಂಕ್ ಜನಾರ್ಧನ್ ನಟಿಸಿದ್ದಾರೆ. ಜಗ್ಗೇಶ್ಗೆ ತಂದೆಯಾಗಿ ನಟಿಸಿದ ಸಿನಿಮಾಗಳು ಬ್ಲಾಕ್ ಬಸ್ಟರ್ ಆಗಿದ್ದವು. ಸೂಪರ್ನನ್ ಮಗ, ತರ್ಲೆ ನನ್ ಮಗ ಚಿತ್ರದಲ್ಲಿ ತಂದೆಯಾಗಿ ನಟಸಿದ್ದರು. ಹಾಸ್ಯಕ್ಕೆ ಕನ್ನಡದಲ್ಲಿ ಮುಸರಿ ಕೃಷ್ಣಮೂರ್ತಿ, ನರಸಿಂಹರಾಜು ಬಳಿಕ ಅವರ ಸ್ಥಾನವನ್ನ ತುಂಬಿದ್ದರು. ಬ್ಯಾಂಕ್ ಜನಾರ್ಧನ್ .
1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ನಟ. ಬೆಂಗಳೂರಿನಲ್ಲಿಯೇ. ತಮ್ಮ ಶಿಕ್ಷಣ ಪೂರ್ಣಗೊಳಿಸಿದ್ದಾರೆ. 80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಈವೆರೆಗೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ, ಹಾಸ್ಯ ನಟರಾಗಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ.