Chief Editor
Manohar. R (Manu)
Photo Journalist
chitrataramanu@gmail.com
+91 9845549026
ಈ ವಾರ ತೆರೆಗೆ ಬಳ್ಳಾರಿ ಭಾಗದ ಪ್ರೇಮ ಕಥಾನಕ ``ಅಮರ ಪ್ರೇಮಿ ಅರುಣ್``
Posted date: 23 Wed, Apr 2025 10:35:15 AM
ಒಲವು ಸಿನಿಮಾ ಲಾಂಛನದಲ್ಲಿ ಒಲವಿನ ಗೆಳೆಯರು ಒಂದಿಷ್ಟು ಜನ ಸೇರಿ ಒಲವಿನಿಂದ ನಿರ್ಮಾಣ ಮಾಡಿರುವ ಹಾಗೂ ಪ್ರವೀಣ್ ಕುಮಾರ್ ಜಿ ಬರವಣಿಗೆ ಹಾಗೂ ನಿರ್ದೇಶನದ " ಅಮರ ಪ್ರೇಮಿ ಅರುಣ್" ಚಿತ್ರ ಈ ವಾರ(ಏಪ್ರಿಲ್ 25) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.  
 
ಬಳ್ಳಾರಿ ಭಾಗದ ಪ್ರೇಮ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಹರಿಶರ್ವ ಅಭಿನಯಿಸಿದ್ದಾರೆ. ನಾಯಕಿಯಾಗಿ ದೀಪಿಕಾ ಆರಾಧ್ಯ ಇದ್ದಾರೆ.  ಧರ್ಮಣ್ಣ ಕಡೂರು, ಕ್ರಿತಿ ಭಟ್, ಮಹೇಶ್ ಬಂಗ್, ಅರ್ಚನಾ ಕೊಟ್ಟಿಗೆ, ರಂಜಿತಾ ಪುಟ್ಟಸ್ವಾಮಿ, ಮಂಜಮ್ಮ ಜೋಗತಿ, ರಾಧ ರಾಮಚಂದ್ರ, ಬಲ‌ ರಾಜವಾಡಿ ಹೀಗೆ ಅನುಭವಿ ಕಲಾವಿದರ ದೊಡ್ಡ  ದಂಡೆ ಈ ಚಿತ್ರದಲ್ಲಿದೆ. ಬಳ್ಳಾರಿ ಆಸುಪಾಸಿನಲ್ಲೇ ಚಿತ್ರೀಕರಣ ನಡೆದಿರುವ ಈ ಚಿತ್ರದ ಸಂಭಾಷಣೆ ಕೂಡ ಅಲ್ಲಿನ ಸೊಗಡಿನಲ್ಲೇ ಇರುತ್ತದೆ.      
 
ಯೋಗರಾಜ್ ಭಟ್, ಜಯಂತ ಕಾಯ್ಕಿಣಿ ಹಾಗೂ ಪ್ರವೀಣ್ ಕುಮಾರ್ ಅವರು ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಕಿರಣ್ ರವೀಂದ್ರನಾಥ್ ಸಂಗೀತ ನೀಡಿದ್ದಾರೆ. ಡಿ ಬಿಟ್ಸ್ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಈಗಾಗಲೇ ಜನಪ್ರಿಯವಾಗಿದೆ. ಪ್ರವೀಣ್ ಎಸ್ ಛಾಯಾಗ್ರಹಣ ಹಾಗೂ  ಮನು ಶೇಡ್ಗಾರ್ ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಮಂಡ್ಯ ಮಂಜು ಕಾರ್ಯ ನಿರ್ವಹಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಈ ವಾರ ತೆರೆಗೆ ಬಳ್ಳಾರಿ ಭಾಗದ ಪ್ರೇಮ ಕಥಾನಕ ``ಅಮರ ಪ್ರೇಮಿ ಅರುಣ್`` - Chitratara.com
Copyright 2009 chitratara.com Reproduction is forbidden unless authorized. All rights reserved.