Chief Editor
Manohar. R (Manu)
Photo Journalist
chitrataramanu@gmail.com
+91 9845549026
``ಕಾಂತಾರ ಚಾಪ್ಟರ್ 1`` ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೊಂಬಾಳೆ ಫಿಲಂಸ್ ಸ್ಪಷ್ಟನೆ
Posted date: 24 Sat, May 2025 10:48:52 AM
"ಕಾಂತಾರಾ ಚಾಪ್ಟರ್ 1" ಬಿಡುಗಡೆ ದಿನಾಂಕವನ್ನು ಅಕ್ಟೋಬರ್ 2, 2025 ಕ್ಕೆ ನಿಗದಿಪಡಿಸಲಾಗಿದೆ ಎಂದು ಹೊಂಬಾಳೆ ಫಿಲಂಸ್ ಈಗಾಗಲೇ ಘೋಷಿಸಿತ್ತು ‌. ಆದರೆ ಇತ್ತೀಚೆಗೆ ಈ ದಿನಾಂಕದ ಬಗ್ಗೆ ಕೆಲವು ಊಹಾಪೋಹಗಳು ಹರಡಿದ್ದವು‌. ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಹೊಂಬಾಳೆ ಫಿಲಂಸ್ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅಧಿಕೃತವಾಗಿ ಸ್ಪಷ್ಟ ಪಡಿಸಿದೆ. 
ಯೋಜನೆಯಂತೆ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ. ಹಿಂದಿನ "ಕಾಂತಾರ" ಚಿತ್ರದ ಯಶಸ್ಸಿನ ನಂತರ "ಕಾಂತಾರ ಚಾಪ್ಟರ್ 1" ಸಹ ಪ್ರೇಕ್ಷಕರನ್ನು ಮತ್ತಷ್ಟು ಆಳವಾದ ಕಥೆ, ಸಂಸ್ಕೃತಿ ಮತ್ತು ದೈವಿಕ ಲೋಕಕ್ಕೆ ಕರೆದೊಯ್ಯಲಿದೆ. 
 
ನಿಮ್ಮ ಕಾತುರಕ್ಕೆ ತಕ್ಕಂತೆ ಚಿತ್ರವೂ ಅಂದುಕೊಂಡ ದಿನಾಂಕದಂದೆ ತೆರೆಗೆ ಬರಲಿದೆ ಎಂದು ಹೊಂಬಾಳೆ ಫಿಲಂಸ್ ತಿಳಿಸಿದೆ. ಆದರಿಂದ ಯಾವುದೇ ಅನಧಿಕೃತ ಮಾಹಿತಿಗಳಿಗೆ ಕಿವಿಗೊಡದೆ ಅಧಿಕೃತ ಪ್ರಕಟಣೆಗಳನ್ನಷ್ಟೆ ನಂಬಲು ಚಿತ್ರತಂಡ ಮನವಿ ಮಾಡಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ``ಕಾಂತಾರ ಚಾಪ್ಟರ್ 1`` ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೊಂಬಾಳೆ ಫಿಲಂಸ್ ಸ್ಪಷ್ಟನೆ - Chitratara.com
Copyright 2009 chitratara.com Reproduction is forbidden unless authorized. All rights reserved.