Chief Editor
Manohar. R (Manu)
Photo Journalist
chitrataramanu@gmail.com
+91 9845549026
ಡಿ.ಸತ್ಯಪ್ರಕಾಶ್ ನಿರ್ದೇಶನ ಹಾಗೂ ನಟನೆಯ ಬಹು ನಿರೀಕ್ಷಿತ ``X&Y`` ಜೂನ್ ತಿಂಗಳಲ್ಲಿ ತೆರೆಗೆ ಬರಲಿದೆ
Posted date: 30 Fri, May 2025 10:50:05 AM
"ರಾಮಾ ರಾಮಾ ರೇ" ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ "X&Y" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರವನ್ನು ನೀಡಿದೆ. ಜೂನ್ ತಿಂಗಳಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆಯನ್ನು ಚಿತ್ರತಂಡ ನಡೆಸಿದೆ. 
 
ಈಗಾಗಲೇ ಪೋಸ್ಟರ್ ಸೇರಿದಂತೆ ಕೆಲವು ಕಂಟೆಂಟ್ ಗಳ ಮೂಲಕ ತೀವ್ರ ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ನಿರ್ದೇಶಕ ಸತ್ಯಪ್ರಕಾಶ್ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. "X&Y",  ಡಿ.ಸತ್ಯಪ್ರಕಾಶ್ ನಿರ್ದೇಶನದ  ನಾಲ್ಕನೇ ಚಿತ್ರ.  ಈ ಮೊದಲು "ರಾಮಾ ರಾಮಾ ರೇ ", "ಒಂದಲ್ಲಾ ಎರಡಲ್ಲಾ" ಮತ್ತು "ಮ್ಯಾನ್ ಆಫ್ ದಿ ಮ್ಯಾಚ್ " ಚಿತ್ರಗಳನ್ನು ಅವರು ನಿರ್ದೇಶಿಸಿದ್ದು, ಮೂರು ಚಿತ್ರಗಳು ಭಿನ್ನ ಕಥೆಯ ಮೂಲಕ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ‌‌. ಬಿಡುಗಡೆಯ ಹಂತದಲ್ಲಿರುವ ಸತ್ಯಪ್ರಕಾಶ್ ನಿರ್ದೇಶನದ "X&Y" ಚಿತ್ರ ಕೂಡ ಭರ್ಜರಿ ಯಶಸ್ಸು ಕಾಣಲಿ ಹಾಗೂ ಪ್ರಶಸ್ತಿಗಳು ಲಭಿಸಲಿ ಎಂದು ಚಿತ್ರತಂಡದ ಹಾರೈಕೆ.   

ಲವಿತ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರವನ್ನು ಸತ್ಯ ಪಿಕ್ಚರ್ಸ್ ನಿರ್ಮಿಸಿದೆ. ಬೃಂದಾ ಆಚಾರ್ಯ, ಡಿ.ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ , ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರ "X&Y"  ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಡಿ.ಸತ್ಯಪ್ರಕಾಶ್ ನಿರ್ದೇಶನ ಹಾಗೂ ನಟನೆಯ ಬಹು ನಿರೀಕ್ಷಿತ ``X&Y`` ಜೂನ್ ತಿಂಗಳಲ್ಲಿ ತೆರೆಗೆ ಬರಲಿದೆ - Chitratara.com
Copyright 2009 chitratara.com Reproduction is forbidden unless authorized. All rights reserved.