ಹಿರಿಯ ನಿರ್ದೇಶಕ ಓಂ ಪ್ರಕಾಶ್ ರಾವ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ಫೀನಿಕ್ಸ್” ಚಿತ್ರದ ಚಿತ್ರೀಕರಣದ ಕ್ಲೈಮಾಕ್ಸ್ ಚಿತ್ರೀಕರಣದ ವೇಳೆ ಬೆಂಕಿ ತಗುಲಿದ ಹಿನ್ನೆಲೆಯಲ್ಲಿ ನಟ ಭಾಸ್ಕರ್ ಶೆಟ್ಟಿ ಕೂದಲೆಳೆಯ ಅಂತರದಿಂದ ಪಾರಾಗಿದ್ಧಾರೆ.
ಕನಕಪುರ ರಸ್ತೆಯ ವಡೇರಹಳ್ಳಿಯಲ್ಲಿ ಚಿತ್ರದ ಅಂತಿಮ ಹಂತದ ಚಿತ್ರೀಕರಣ ವೇಳೆ ಬೆಂಕಿ ತಗುಲು ಕೈಕಾಲು ಸೇರಿದಂತೆ ಬೆಂಕಿಯಿಂದ ಸುಟ್ಟಗಾಯಗಳಾಗಿದ್ದು ಯಾವುದೇ ದೊಡ್ಡ ಅನಾಹುತವಾಗದಂತೆ ಪಾರಾಗಿದ್ಧಾರೆ, ಚಿತ್ರದಲ್ಲಿ ನಾಯಕ ನಟನಾಗಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಚಿತ್ರದ ಕ್ಲೈಮ್ಯಾಕ್ಸ್ ಸನ್ನಿವೇಶದಲ್ಲಿ ಹಲವು ಮಹಿಳೆಯರು ಪೊರಕೆಯಲ್ಲಿ ಹೊಡೆಯುವ ಸನ್ನಿವೇಶ ಚಿತ್ರೀಕರಣ ಮಾಡಲಾಗಿತ್ತಿತ್ತು, ಆ ಬಳಿಕ ಬೆಂಕಿ ಹಚ್ಚುವ ಸನ್ನಿವೇಶದಲ್ಲಿ ಈ ಅವಘಡ ಸಂಭವಿಸಿದೆ.
ಹೊಡೆದಾಟದ ಸನ್ನಿವೇಶದಲ್ಲಿ ಈ ಘಟನೆ ನಡೆದಿದೆ, ಚಿತ್ರೀಕರಣದ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿದ್ಧಾರೆ, ಇದರಿಂದ ನಟ ಭಾಸ್ಕರ್ ಶೆಟ್ಟಿ ಅಪಾಯದಿಂದ ಪಾರಾಗಿದ್ಧಾರೆ.
ಇದರಿಂದ ಚಿತ್ರತಂಡ ನೆಮ್ಮದಿಯ ನಿಟ್ಟಿಸಿರು ಬಿಟ್ಟಿದೆ. ಚಿತ್ರೀಕರಣ ಸ್ಥಳದಲ್ಲಿದ್ದ ಚಿತ್ರತಂಡದ ಸದಸ್ಯರು ಬಾಸ್ಕರ್ ಶೆಟ್ಟಿಗೆ ಕಾಲಿಗೆ ತಗುಲಿದ್ದ ಬೆಂಕಿ ನಂದಿಸಿದ್ದಾರೆ.
ಚಿತ್ರೀಕರಣದ ವೇಳೆ ನಟ ಭಾಸ್ಕರ್ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗಿದೆ, ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ನಿರ್ದೇಶನ ಮಾಡುತ್ತಿದ್ದಾರೆ, ಈ ಚಿತ್ರದಲ್ಲಿ ನಿಮಿಕಾ ರತ್ನಾಕರ್ ಸೇರಿದಂತೆ ಹಲವರು ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಚಿತ್ರೀಕರಣದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಚಿತ್ರತಂಡ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದರಿಂದ ಅನಾಹುತ ತಪ್ಪಿಸಲು ಸಹಕಾರಿಯಾಗಲಿದೆ. ಈಗಾಗಲೇ ಹೆಲಿಕ್ಯಾಪ್ಟರ್ ದುರಂತದಲ್ಲಿ ಇಬ್ಬರು ಇಬ್ಬರು ಭರವಸೆಯ ನಟರನ್ನು ಚಿತ್ರತಂಡ ಕಳೆದುಕೊಂಡಿದೆ.
ಮುನ್ನೆಚ್ಚರಿಕೆ ವಹಿಸುವುದರಿಂದ ಎದುರಾಗಬಹುದಾದ ಅನಾಹುತ ತಪ್ಪಿಸಬಹುದಾಗಿದೆ, ಈ ನಿಟ್ಟಿನಲ್ಲಿ ಚಿತ್ರತಂಡಗಳು ಅಗತ್ಯ ಕ್ರಮ ಕೈಗೊಳ್ಳುವುದು ಕಲಾವಿದರ ಜೀವದ ಹಿತದೃಷ್ಠಿಯಿಂದ ಒಳ್ಳೆಯದು.