Chief Editor
Manohar. R (Manu)
Photo Journalist
chitrataramanu@gmail.com
+91 9845549026
ಪವನ್‌ ಕಲ್ಯಾಣ್ ನಟನೆಯ `ಹರಿ ಹರ ವೀರ ಮಲ್ಲು`ಜುಲೈ 24ಕ್ಕೆ ರಿಲೀಸ್‌
Posted date: 21 Sat, Jun 2025 01:30:25 PM
ತೆಲುಗು ಚಿತ್ರರಂಗದ ಪವರ್‌ ಸ್ಟಾರ್ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿ ಗದ್ದುಗೇರಿದ ಮೇಲೆ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಬಹಳ ದಿನಗಳಿಂದ ಬಳಿಕ ಸಿನಿಮಾ ಕಡೆ ಮುಖ ಮಾಡಿದ್ದಾರೆ. ಇದೀಗ ಪವನ್‌ ಕಲ್ಯಾಣ್‌ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಅವರು ನಟಿಸಿರುವ ಬಹುನಿರೀಕ್ಷಿತ ಸಿನಿಮಾ `ಹರಿ ಹರ ವೀರ ಮಲ್ಲು`  ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ರಿಲೀಸ್‌ ಡೇಟ್‌ ಘೋಷಣೆಯಾಗಿದೆ. 
 
ಹರಿ ಹರ ವೀರ ಮಲ್ಲು ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಸಿನಿಪ್ರಿಯರಿಗೆ ಇಷ್ಟವಾಗಿವೆ. ಬಿಗ್ ಬಜೆಟ್ ತಯಾರಾಗಿರುವ ಹರಿ ಹರ ವೀರ ಮಲ್ಲು ಸಿನಿಮಾ ಜುಲೈ 24ರಂದು ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಬಿಡುಗಡೆಯಾಗಲಿದೆ.
 
ಹರಿ ಹರ ವೀರ ಮಲ್ಲುವಾಗಿ ಪವನ್ ಕಲ್ಯಾಣ್ ಸಿನಿಮಾದಲ್ಲಿ ಅಬ್ಬರಿಸಿದ್ದಾರೆ. 17ನೇ ಶತಮಾನದಲ್ಲಿ ಮೊಘಲ್ ಸಾಮ್ರಾಜ್ಯದ ವಿರುದ್ಧ ಹೋರಾಡಿದ ನಾಯಕನಾಗಿ ಪವರ್ ಸ್ಟಾರ್ ಮಿಂಚಿದ್ದಾರೆ. 300 ವರ್ಷಗಳ ಹಿಂದಿನ ಕಾಲಘಟ್ಟ ಕಟ್ಟಿಕೊಡಲು ಚಿತ್ರತಂಡ ಬಹಳ ಶ್ರಮಿಸಿದೆ. ವೀರಮಲ್ಲು ಆಗಿ ಪವನ್ ಕಲ್ಯಾಣ್ ಲುಕ್, ಗೆಟಪ್ ಭರವಸೆ ಮೂಡಿಸಿದೆ. ಜ್ಯೋತಿ ಕೃಷ್ಣ ಮತ್ತು ಕ್ರಿಶ್ ಜಗರ್ಲಮುಡಿ ನಿರ್ದೇಶನದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ಮೂಡಿಬಂದಿದೆ. 
 
ಚಿತ್ರದಲ್ಲಿ ನಿಧಿ ಅಗರ್‌ವಾಲ್ ನಾಯಕಿಯಾಗಿ ಮಿಂಚಿದ್ದಾರೆ. ಇನ್ನುಳಿದಂತೆ ಬಾಬಿ ಡಿಯೋಲ್, ನರ್ಗೀಸ್ ಫಕ್ರಿ, ಆದಿತ್ಯಾ ಮೆನನ್, ಶುಭಲೇಖ ಸುಧಾಕರ್ ತಾರಾಗಣದಲ್ಲಿದ್ದಾರೆ. ರೋಚಕ ಯುದ್ಧದ ಸನ್ನಿವೇಶಗಳು ಚಿತ್ರದಲ್ಲಿದೆ. ಮೆಗಾ ಸೂರ್ಯ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಎ. ದಯಾಕರ್ ರಾವ್ ಈ ಚಿತ್ರವನ್ನು ನಿರ್ಮಿಸಿದ್ದು, ಎ.ಎಂ. ರತ್ನಂ ಪ್ರಸ್ತುತಪಡಿಸುತ್ತಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ, ಮನೋಜ್ ಪರಮಹಂಸ ಛಾಯಾಗ್ರಹಣ ಚಿತ್ರಕ್ಕಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಪವನ್‌ ಕಲ್ಯಾಣ್ ನಟನೆಯ `ಹರಿ ಹರ ವೀರ ಮಲ್ಲು`ಜುಲೈ 24ಕ್ಕೆ ರಿಲೀಸ್‌ - Chitratara.com
Copyright 2009 chitratara.com Reproduction is forbidden unless authorized. All rights reserved.