Chief Editor
Manohar. R (Manu)
Photo Journalist
chitrataramanu@gmail.com
+91 9845549026
ಸುವರ್ಣ ಸಂಕಲ್ಪ ಅಮೃತಘಳಿಗೆ ನೇತೃತ್ವ ವಹಿಸಿಕೊಂಡ ಜೋಗಿ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್
Posted date: 31 Thu, Jul 2025 11:33:22 AM
ಕಳೆದ ೪೦ ವರ್ಷಗಳಿಂದ ಅಶ್ವಿನಿ ಆಡಿಯೋ ಕಂಪನಿ ನಡೆಸಿಕೊಂಡು ಬರುತ್ತಿರುವ ಅಶ್ವಿನಿ ರಾಮಪ್ರಸಾದ್ ಅವರೀಗ ಕಿರುತೆರೆ ಕ್ಷೇತ್ರಕ್ಕೂ ಎಂಟ್ರಿ ಕೊಟ್ಟಿದ್ದಾರೆ. ದಶಕಗಳ ಹಿಂದೆ ಸಾವಿರಾರು ಜಾನಪದ, ಭಕ್ತಿಗೀತೆಗಳನ್ನು ತಮ್ಮ ಆಡಿಯೋ ಕಂಪನಿ ಮೂಲಕ ಜನರಿಗೆ ಕೇಳಿಸಿದ ರಾಮ್ ಪ್ರಸಾದ್ ಅವರಿಗೆ ಮೊದಲಿಂದಲೂ ಕಿರುತೆರೆ ಬಗ್ಗೆ ಆಸಕ್ತಿಯಿತ್ತು. ಆದಕ್ಕೆ ಸುವರ್ಣ ವಾಹಿನಿ ಒಂದು  ವೇದಿಕೆ ಕಲ್ಪಿಸಿಕೊಟ್ಟಿದೆ.
 
ಶಿವಣ್ಣ, ಪ್ರೇಮ್ ಕಾಂಬಿನೇಶನ್ ನ ಜೋಗಿ ಚಿತ್ರ ನಿರ್ಮಿಸುವ ಮೂಲಕ ದಾಖಲೆ ಬರೆದ ಅಶ್ವಿನಿ ರಾಮ್ ಪ್ರಸಾದ್ ಆನಂತರವೂ  ಹಲವಾರು ಯಶಸ್ವೀ ಚಲನಚಿತ್ರಗಳನ್ನು ನಿರ್ಮಿಸಿದ್ದರು. ಅಲ್ಲದೆ ಘಾರ್ಗ ಚಿತ್ರದ ಮೂಲಕ ತಮ್ಮ ಪುತ್ರನನ್ನೂ ಹೀರೋ ಮಾಡುತ್ತಿದ್ದಾರೆ. ಇದೆಲ್ಲದರ ನಡುವೆ ಇದೀಗ ಧಾರ್ಮಿಕ ಹಾಗೂ ವಾಸ್ತುಶಾಸ್ತ್ರದ ಹಿನ್ನೆಲೆಯ "ಸುವರ್ಣ ಸಂಕಲ್ಪ ಅಮೃತಘಳಿಗೆ" ಕಾರ್ಯಕ್ರಮ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈ  ಕಾರ್ಯಕ್ರಮವನ್ನು ಕರ್ನಾಟಕ ಜ್ಯೋತಿಷ್ಯರತ್ನ ಪ್ರಶಸ್ತಿ ಪುರಸ್ಕೃತರಾದ ವಿಶ್ವನಾಥ ಭಾಗವತ ಗುರೂಜಿಯವರು ನಡೆಸಿಕೊಡಲಿದ್ದಾರೆ. ಗಾಯಕಿಯೂ ಆದ ಅಖಿಲಾ ನಿರೂಪಣೆಯ ಜವಾಬ್ದಾರಿ ಹೊತ್ತಿದ್ದಾರೆ. ಆಗಸ್ಟ್ 4 ರಿಂದ ಪ್ರತಿದಿನ ಬೆ.7-30ಕ್ಕೆ ಸುವರ್ಣ ಸಂಕಲ್ಪ ಅಮೃತಘಳಿಗೆ  ಪ್ರಸಾರವಾಗಲಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ರಾಮ್ ಪ್ರಸಾದ್ ಈಗಾಗಲೇ 6 ವರ್ಷಗಳಿಂದ ನಡೆದುಕೊಂಡು ಬಂದಿರುವ ಕಾರ್ಯಕ್ರಮವಿದು. ಇದರ ನಂತರ ನಾವೇನು ಮಾಡಬೇಕು ಅಂತ  ಪ್ಲಾನ್ ಮಾಡುತ್ತಿದ್ದೇವೆ.ರಾಜ್ಯದ, ದೇಶದ ಎಲ್ಲಾ ಪ್ರಖ್ಯಾತ ದೇವಸ್ಥಾನಗಳಿಗೂ ವಿಸಿಟ್ ಮಾಡಬೇಕೆಂಬ ಪ್ಲಾನಿದೆ. ಅಲ್ಲದೆ ನಮಗೆ ಯಾರೇ ಕಾಲ್ ಮಾಡಿದರೂ ಬಡವ, ಬಲ್ಲಿದ ಅಂತ ನೋಡದೆ ಅವರ ಮನೆಗಳಿಗೆ ಹೋಗಿ ವಾಸ್ತು ಪರಿಹಾರ ಸೂಚಿಸುತ್ತೇವೆ ಎಂದು ಹೇಳಿದರು‌.
 
ಇದರ ಜತೆಗೆ ಸಂಜೀವಿನಿ ಸಂಕಲ್ಪ, ಯೋಗ ಸಂಕಲ್ಪ, ಮಂತ್ರ ಸಂಕಲ್ಪ ಹೀಗೆ ಅನೇಕ ಶೀರ್ಷಿಕೆಯಡಿ ಈ ಕಾರ್ಯಕ್ರಮ ನಡೆಯಲಿದೆ.
ವೇದಿಕೆಯಲ್ಲಿ  ವಿಶ್ವನಾಥ ಗುರೂಜಿ, ನಿರೂಪಕಿ ಅಖಿಲಾ ಹಾಗೂ ಸುವರ್ಣ ವಾಹಿನಿಯ ಮುಖ್ಯಸ್ಥರೂ ಸುವರ್ಣ ಸಂಕಲ್ಪ ಅಮೃತಘಳಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಸುವರ್ಣ ಸಂಕಲ್ಪ ಅಮೃತಘಳಿಗೆ ನೇತೃತ್ವ ವಹಿಸಿಕೊಂಡ ಜೋಗಿ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ - Chitratara.com
Copyright 2009 chitratara.com Reproduction is forbidden unless authorized. All rights reserved.