ಬಹು ನಿರೀಕ್ಷಿತ ಚಿತ್ರ `ಕಾಂತಾರ ಚಾಪ್ಟರ್ 1` ನಲ್ಲಿ ಜನಪ್ರಿಯ ನಟ ಗುಲ್ಶನ್ ದೇವಯ್ಯ ಅವರು ಪ್ರಮುಖ ಪಾತ್ರವಾದ ಕುಲಶೇಖರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೊಂಬಾಳೆ ಫಿಲಮ್ಸ್ ಹೆಮ್ಮೆಯಿಂದ ಘೋಷಿಸಿದೆ.
ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರ, ಜಾಗತಿಕವಾಗಿ ಮೆಚ್ಚುಗೆ ಗಳಿಸಿದ `ಕಾಂತಾರ` (2022) ದ ಹಿಂದಿನ ಅಧ್ಯಾಯವಾಗಿದ್ದು, ಹೊಂಬಾಳೆ ಫಿಲಮ್ಸ್‌ನ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ಈ ಚಿತ್ರವು ಸಂಸ್ಕೃತಿ, ಜಾನಪದ ಮತ್ತು ಅದ್ಭುತ ಕಥಾಹಂದರದ ಆಳವಾದ ಪದರಗಳನ್ನು ಪರಿಶೋಧಿಸಲಿದೆ.
ರಿಷಬ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ `ಕಾಂತಾರ ಚಾಪ್ಟರ್ 1` ಪ್ರಬಲ ನಿರೂಪಣೆ ಮತ್ತು ಅದ್ಭುತ ದೃಶ್ಯಗಳೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸಲು ಸಿದ್ಧವಾಗಿದೆ. ಗುಲ್ಶನ್ ದೇವಯ್ಯ ಅವರ ಆಗಮನವು ಚಿತ್ರದ ದೊಡ್ಡ ಜಗತ್ತಿಗೆ ಹೊಸ ಆಯಾಮವನ್ನು ಸೇರಿಸಿದೆ.
ಈ ಚಿತ್ರವು 2025ರ ಅಕ್ಟೋಬರ್ ತಿಂಗಳಲ್ಲಿ ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಬಂಗಾಳಿ ಭಾಷೆಗಳಲ್ಲಿ ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.