Chief Editor
Manohar. R (Manu)
Photo Journalist
chitrataramanu@gmail.com
+91 9845549026
ಚಿರಂಜೀವಿ 158ನೇ ಸಿನಿಮಾಗೆ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ `ಕೆ ವಿ ಎನ್` ಸಂಸ್ಥೆ ನಿರ್ಮಾಣ
Posted date: 24 Sun, Aug 2025 10:53:15 PM
ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಇದೀಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದೆ. ನಿರ್ಮಾಣ ಹಾಗೂ ವಿತರಣೆಯಲ್ಲಿ ದೊಡ್ಡ ಹೆಸರು ಮಾಡಿರುವ ಈ ಸಂಸ್ಥೆ ಈಗ ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಸಿನಿಮಾ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದೆ.
 
ಬಹುನಿರೀಕ್ಷಿತ ಟಾಕ್ಸಿಕ್, ಕೆಡಿ ಸಿನಿಮಾ ನಿರ್ಮಿಸುತ್ತಿರುವ ಕೆವಿಎನ್  ತಮಿಳಿನಲ್ಲಿ ದಳಪತಿ ವಿಜಯ್ ನಟನೆಯ `ಜನ ನಾಯಗನ್`ಚಿತ್ರ ನಿರ್ಮಾಣ ಮಾಡುವ ಮೂಲಕ ತಮಿಳು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದೆ. ಇದೀಗ ತೆಲುಗು ಚಿತ್ರರಂಗ ದತ್ತ ಮುಖ ಮಾಡಿರುವ ಕೆವಿಎನ್ ಚಿರಂಜೀವಿ ಅವರ 158ನೇ ಸಿನಿಮಾಗೆ ಬಂಡವಾಳ ಹೂಡಲು ಮುಂದಾಗಿದೆ.

ಮೆಗಾ ಸ್ಟಾರ್ 70ನೇ ಹುಟ್ಟುಹಬ್ಬದ ವಿಶೇಷವಾಗಿ ಈ ಪ್ರಾಜೆಕ್ಟ್ ಅನೌನ್ಸ್ ಮಾಡಲಾಗಿದೆ. ಈ ಹಿಂದೆ ವಾಲ್ತೇರು ವೀರಯ್ಯ ಸಿನಿಮಾ ಮಾಡಿದ್ದ ಬಾಬಿ ಕೊಲ್ಲಿ ಮತ್ತೊಮ್ಮೆ‌ ಚಿರುಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. 

ಚಿರಂಜೀವಿ-ಬಾಬಿ-ಕೆವಿಎನ್ ಕಾಂಬಿನೇಷನ್ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಮೂಡಿ ಬರಲಿದೆ. ಈ ಚಿತ್ರವನ್ನು ದಸರಾಗೆ ಲಾಂಚ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದ್ದು, ವರ್ಷದ ಕೊನೆಗೆ ಶೂಟಿಂಗ್ ಆರಂಭವಾಗಲಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಚಿರಂಜೀವಿ 158ನೇ ಸಿನಿಮಾಗೆ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ `ಕೆ ವಿ ಎನ್` ಸಂಸ್ಥೆ ನಿರ್ಮಾಣ - Chitratara.com
Copyright 2009 chitratara.com Reproduction is forbidden unless authorized. All rights reserved.