ನಿರ್ದೇಶಕ ಪ್ರೇಮ್ ಅವರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ "ಕೆಡಿ" ಚಿತ್ರ ದಿನದಿಂದ ದಿನಕ್ಕೆ ಕುತೂಹಲವನ್ನು ಮತ್ತಷ್ಟು ಹೆಚ್ಚು ಮಾಡುತ್ತಿದೆ. ಇದೀಗ ಚಿತ್ರ ತಂಡಕ್ಕೆ ನಟ ಕಿಚ್ಚ ಸುದೀಪ್ ಸೇರ್ಪಡೆಯಾಗಿದ್ದು ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.
"ಕೆಡಿ" ಚಿತ್ರದಲ್ಲಿ ನಟ ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ವಿಷಯವನ್ನು ನಿರ್ದೇಶಕ ಪ್ರೇಮ್ ಖಚಿತಪಡಿಸಿದ್ದಾರೆ. ಯಾವುದೇ ಗಾಸಿಪ್ ಬೇಡ ಕೇಳಿ ಚಿತ್ರದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ ಎನ್ನುವ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಹೈದರಾಬಾದ್ ನಲ್ಲಿ ಹಾಕಿರುವ ವಿಶೇಷ ಸೆಟ್ ನಲ್ಲಿ ಕಿಚ್ಚ ಸುದೀಪ್ ಹಾಗೂ ಧ್ರುವ ಸರ್ಜಾ ಸೇರಿದಂತೆ ಇನ್ನಿತರರು ಭಾಗಿಯಾಗಿರುವ ಸನ್ನಿವೇಶದ ಚಿತ್ರೀಕರಣ ನಡೆಯುತ್ತಿದೆ. ನಿರ್ದೇಶಕ ಪ್ರೇಮ್ ಅವರು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಭಾಗಿಯಾಗಿರುವ ಸನ್ನಿವೇಶಗಳ ದೃಶ್ಯಗಳನ್ನು ಸೆರೆ ಹಿಡಿಯುವ ಕೆಲಸದಲ್ಲಿ ನಿರತರಾಗಿದ್ದಾರೆ
ಕೆಡಿ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಸುದೀಪ್ ಅಭಿನಯಿಸಿತ್ತಿದ್ದಾರೆ. ಈ ಸಂಬಂದ ಸಂಪೂರ್ಣ ಮಾಹಿತಿ ಸದ್ಯದಲ್ಲೇ ಚಿತ್ರತಂಡದಿಂದ ಬರಲಿದೆ
ಪ್ರೇಮ್ ನಿರ್ದೇಶನದ ಕೆ.ವಿ.ಎನ್ ಪ್ರೊಡಕ್ಷನ್ಸ್ ನಿರ್ಮಾಣದ ಧ್ರುವಾ ಸರ್ಜಾ ಸಂಜಯ್ ದತ್ ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ, ರವಿಚಂದ್ರನ್, ರಮೇಶ್ ಅರವಿಂದ್ ಅಭಿನಯದ ಕೆಡಿಯಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಂಡಿರೋದು ಕುತೂಹಲ ಹೆಚ್ಚಿಸಿದೆ.
ಶಿವರಾಜ್ ಕುಮಾರ್ ಮತ್ತು ಕಿಚ್ಚ ಸುದೀಪ್ ಅವರು ನಟಿಸಿದ್ದ "ವಿಲನ್" ಚಿತ್ರವನ್ನು ನಿರ್ದೇಶಕ ಪ್ರೇಮ್ ಆಕ್ಷನ್ ಹೇಳಿದ್ದರು ಇದೀಗ ಪ್ರೇಮ ಅವರ ಎರಡನೇ ಚಿತ್ರದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ ಹೀಗಾಗಿ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚುವಂತೆ ಮಾಡಿದೆ