Chief Editor
Manohar. R (Manu)
Photo Journalist
chitrataramanu@gmail.com
+91 9845549026
ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ `ಡ್ಯಾಡ್‍` ಚಿತ್ರತಂಡದಿಂದ ದೀಪಾವಳಿ ಶುಭಾಶಯ
Posted date: 20 Mon, Oct 2025 09:01:22 PM
ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ "ಡ್ಯಾಡ್" ಚಿತ್ರತಂಡದಿಂದ ದೀಪಾವಳಿ ಶುಭ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆಯಾಗಿದೆ. ಆ ಮೂಲಕ "ಡ್ಯಾಡ್" ಚಿತ್ರತಂಡ ನಾಡಿನ ಜನತೆಗೆ ದೀಪಾವಳಿ ಶುಭಾಶಯ ತಿಳಿಸಿದೆ.  ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದೆ. ಮೈಸೂರು, ನಂದಿ ಬೆಟ್ಟದಲ್ಲಿ ಚಿತ್ರೀಕರಣ ನಡೆದಿದೆ.
 
ಹರೀಶ್‍ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್‍ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ ಹಾಗೂ, ನಿರ್ದೇಶಕರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಬಿ.ಎಸ್‍. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 
 
ಶಿವರಾಜ್‍ಕುಮಾರ್ ಅವರು ಅನೇಕ ವರ್ಷಗಳ ನಂತರ ಈ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್‍ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್‍ ಜನ್ಯ ಅವರ ಸಂಗೀತ ನಿರ್ದೇಶನ ಹಾಗೂ ಬಿ.ರಾಜಶೇಖರ್ ಅವರ ಛಾಯಾಗ್ರಹಣವಿದೆ.
GALLERY
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ `ಡ್ಯಾಡ್‍` ಚಿತ್ರತಂಡದಿಂದ ದೀಪಾವಳಿ ಶುಭಾಶಯ - Chitratara.com
Copyright 2009 chitratara.com Reproduction is forbidden unless authorized. All rights reserved.

Fatal error: Uncaught ArgumentCountError: mysqli_close() expects exactly 1 argument, 0 given in /var/www/2abd550b-0850-492e-b3fe-6b047f2ad0c0/public_html/show-content.php:95 Stack trace: #0 /var/www/2abd550b-0850-492e-b3fe-6b047f2ad0c0/public_html/show-content.php(95): mysqli_close() #1 {main} thrown in /var/www/2abd550b-0850-492e-b3fe-6b047f2ad0c0/public_html/show-content.php on line 95