Chief Editor
Manohar. R (Manu)
Photo Journalist
chitrataramanu@gmail.com
+91 9845549026
ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ನಿರ್ಮಾಪಕ: ಪವನ್ ವೆಂಕಟೇಶ್ ನಿರ್ದೇಶಕ
Posted date: 22 Wed, Oct 2025 12:42:16 PM
ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರು, ನಿರ್ದೇಶಕರೂ ಆದಿಯಾಗಿ ಚಿತ್ರತಂಡ ಮತ್ತು ಸಿನಿಮಾ ಪತ್ರಕರ್ತರೊಂದಿಗೆ ಸಂಪರ್ಕಕೊಂಡಿಯಾಗಿ ಕಳೆದ 5 ದಶಕಗಳಿಂದ ಕೆಲಸ ಮಾಡುತ್ತಿರುವ "ಶ್ರೀ ರಾಘವೇಂದ್ರ ಚಿತ್ರವಾಣ"A ಸಂಸ್ಥೆ ಹಲವು ಚಿತ್ರಗಳನ್ನು ನಿರ್ಮಾಣದಲ್ಲಿಯೂ ಗುರುತಿಸಿಕೊಂಡು ಚಿತ್ರರಂಗಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ಮತ್ತು ಸೇವೆ ನೀಡಿದೆ.

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸ್ಥಾಪಕರಾದ ಡಿ.ವಿ ಸುಧೀಂದ್ರ ಅವರು ಕನ್ನಡ ಚಿತ್ರರಂಗದ ಅಗ್ರ ಸಿನಿಮಾ ಪ್ರಚಾರಕರ್ತರು. ಜೊತೆಗೆ ತಮ್ಮದೇ ಸಂಸ್ಥೆಯಿಂದ "ಒಲವಿನ ಉಡುಗೊರೆ"  "ಗಣೇಶನ ಮದುವೆ", ಗಣೇಶನ ಗಲಾಟೆ, ಗುಂಡನ ಮದುವೆ, ಪಟ್ಟಣಕ್ಕೆ ಬಂದ ಪುಟ್ಟ, ನಗು ನಗುತಾ ನಲಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಮುನ್ನೆಡೆಸುತ್ತಿರುವ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ತಮ್ಮ ಪುತ್ರ ಪವನ್ ವೆಂಕಟೇಶ್  ಆಕ್ಷನ್ ಕಟ್ ಹೇಳಿರುವ "ಫಸ್ಟ್ ಸ್ಯಾಲರಿ" ಕಿರುಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ, ಶೀರ್ಷಿಕೆ ಕೆಳಗೆ ಕನಸುಗಳ ಹಾದಿ ಎನ್ನುವ ಅಡಿಬರಹವಿದೆ. ಡಿವಿ ಸುಧೀಂದ್ರ ಅವರ ಆಶೀರ್ವಾದವಿದೆ

ಈ ಕುರಿತು ಮಾಹಿತಿ ಹಂಚಿಕೊಂಡ ನಿರ್ಮಾಪಕ ಸುಧೀಂದ್ರ ವೆಂಕಟೇಶ್, ಪುತ್ರ ಪವನ್ ಈ ಮುಂಚೆ ಹಲವಾರು ಕಿರುಚಿತ್ರಗಳನ್ನು ನಿರ್ದೇಶನ ಮಾಡಿದ ಅನುಭವ ಹೊಂದಿದ್ದಾರೆ, "ಫಸ್ಟ್ ಸ್ಯಾಲರಿ" ಕಮರ್ಷಿಯಲ್ ಆಗಿ ಮಾಡುತ್ತಿರುವ ಮೊದಲ ಕಿರುಚಿತ್ರ. ತಾಯಿಯ ಸೆಂಟಿಮೆಂಟ್ ಸೇರಿದಂತೆ ಹಲವು ಅಂಶಗಳನ್ನು ಕಿರುಚಿತ್ರ ಒಳಗೊಂಡಿದೆ. ಸಿನಿಮಾ ದಾಟಿಯಲ್ಲಿ ಕಿರುಚಿತ್ರ ಮೂಡಿಬಂದಿದೆ ಎಂದರು.

ಕಿರುಚಿತ್ರದಲ್ಲಿ ಹಿರಿಯ ಕಲಾವಿದರಾದ ಹರಿಣಿ ಶ್ರೀಕಾಂತ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದು ವಿಜಯ್ ಶಿವಕುಮಾರ್, ಯತಿರಾಜ್,ತ್ರಿಶೂಲ್, ಸ್ನೇಹಶ್ರೀ ಮತ್ತು ರಕ್ಷಿತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರು ಸುತ್ತಮುತ್ತ ಕಿರುಚಿತ್ರವನ್ನು ಐದಾರು ದಿನಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ನಮ್ಮದೇ ಶ್ರೀರಾಘವೇಂದ್ರ ಚಿತ್ರವಾಣಿ ಯೂಟೂಬ್‍ನಲ್ಲಿ ಕಿರುಚಿತ್ರ ಬಿಡುಗಡೆ ಮಾಡುವ ಉದ್ದೇಶವಿದೆ  ಎಂದು ಮಾಹಿತಿ ಹಂಚಿಕೊಂಡರು.

ನಿರ್ದೇಶಕ ಪವನ್ ವೆಂಕಟೇಶ್ ಮಾತನಾಡಿ ತಾಯಿಯ ಸೆಂಟಿಮೆಂಟ್ ಆಧರಿಸಿ ಕಿರುಚಿತ್ರ ಮಾಡಲಾಗಿದೆ. ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಕಡಿಮೆ ಒಂದು ತಿಂಗಳು ಆಗಿದೆ. ಕಿರುಚಿತ್ರದಲ್ಲಿ 1 ಹಾಡಿದೆ, ಡಿಐ ಸೇರಿದಂತೆ ಒಟ್ಟಾರೆ ಕಿರುಚಿತ್ರದ ತಯಾರಿಕೆಗೆ 2 ರಿಂದ ಮೂರು ತಿಂಗಳು ಹಿಡಿದಿದೆ .“ಫಸ್ಟ್ ಸಾಲರಿ” ಕಿರುಚಿತ್ರ ಒಟ್ಟಾರೆ 24 ನಿಮಿಷದ ಅವಧಿ ಒಳಗೊಂಡಿದೆ ಎಂದರು.

ಫಸ್ಟ್ ಸ್ಯಾಲರಿಗೂ ಮುನ್ನ 2021ರಲ್ಲಿ  ಕರೋನಾ ಸೋಂಕಿನ ಸಮಯದಲ್ಲಿ "ಕರೋನಾ ಕರಾಳ ನಾಶ" ಕಿರುಚಿತ್ರ ಮಾಡಿದ್ದೆ ,ಇದರ ಜೊತೆ ಕನ್ನಡದ ಅಗ್ರಗಣ್ಯ ಸಿನಿಮಾ ಪ್ರಚಾರಕರ್ತ ಡಿವಿ ಸುಧೀಂದ್ರ ಅವರ ಬದುಕಿನ ಕುರಿತ "ಡಿ ವಿ ಸುಧೀಂದ್ರ ಸಿನಿ ಪಯಣ" ಸಾಕ್ಷ್ಯಚಿತ್ರ ಹಾಗುಆನಿಮೇಷನ್ ನಲ್ಲಿ ರಾಮಜನ್ಮ ಭೂಮಿ ಕಿರುಚಿತ್ರ ನಿರ್ದೇಶನ ಮಾಡಿದ್ದೆ, ಈಗ ಫಸ್ಟ್ ಸ್ಯಾಲರಿ ಮಾಡಿದ್ದೇನೆ ಎಂದು ಮಾಹಿತಿ ಹಂಚಿಕೊಂಡರು

ನಿರ್ದೇಶನ ತಂಡದಲ್ಲಿ ಮನೋಜ್ ಕುಮಾರ್ ಎಚ್.ಎನ್. ರವಿ ಸಾಸನೂರು ಕೆಲಸ ಮಾಡಿದ್ದು ಪ್ರಚಾರ ಕಲೆ ಮಣಿ ಅವರದು ಎಂದು ವಿವರ ನೀಡಿದರು.

ಕಿರುಚಿತ್ರಕ್ಕೆ ವಿಜಯ್ ಶಿವಕುಮಾರ್ ರಚನೆ, ರಿಚರ್ಡ್ ಡ್ಯಾನಿಯಲ್ ಛಾಯಾಗ್ರಾಹಣದ ಜೊತೆಗೆ ಸಂಕಲನ ಮಾಡಿದ್ದು ವಿಜಯ್ ಹರಿತ್ಸ ಸಂಗೀತ ನೀಡಿದ್ಧಾರೆ. ಡಿಎಸ್ ಸುನೀಲ್ ಸುಧೀಂದ್ರ ಮತ್ತು ಡಿಜಿ ವಾಸುದೇವ್ ಪತ್ರಿಕಾ ಸಂಪರ್ಕವಿದ್ದು ಡಿಜಿಟಲ್ ಮಾರ್ಕೆಟಿಂಗ್‍ನಲ್ಲಿ ಚಂದನ ಪ್ರಸನ್ನ ಕಾರ್ಯನಿರ್ವಹಿಸಿದ್ದಾರೆ.
GALLERY
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ನಿರ್ಮಾಪಕ: ಪವನ್ ವೆಂಕಟೇಶ್ ನಿರ್ದೇಶಕ - Chitratara.com
Copyright 2009 chitratara.com Reproduction is forbidden unless authorized. All rights reserved.

Fatal error: Uncaught ArgumentCountError: mysqli_close() expects exactly 1 argument, 0 given in /var/www/2abd550b-0850-492e-b3fe-6b047f2ad0c0/public_html/show-content.php:95 Stack trace: #0 /var/www/2abd550b-0850-492e-b3fe-6b047f2ad0c0/public_html/show-content.php(95): mysqli_close() #1 {main} thrown in /var/www/2abd550b-0850-492e-b3fe-6b047f2ad0c0/public_html/show-content.php on line 95