Chief Editor
Manohar. R (Manu)
Photo Journalist
chitrataramanu@gmail.com
+91 9845549026
ಪೊಗರು- ಚಿತ್ರದ ನಂತರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ - ನಂದ ಸುಧೀರ್ ಕಾಂಬಿನೇಶನ್ ನ ನೂತನ ಚಿತ್ರ - ವಸುದೈವ ಕುಟುಂಬಕಂ.
Posted date: 06 Tue, Oct 2026 01:38:11 PM
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಂದರ್ಭದಲ್ಲಿ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಘೋಷಣೆಯಾಗಿದೆ. ಮೈರಾ ಕ್ರಿಯೇಷನ್ಸ್ ಲಾಂಛನದಲ್ಲಿ ಹರೀಶ್ ಪೆದ್ದಿ ಅವರು ನಿರ್ಮಿಸುತ್ತಿರುವ, ಬಿ.ಎಸ್ ಸುಧೀಂದ್ರ ಅವರ ಸಹ ನಿರ್ಮಾಪಕರಾಗಿರುವ ಹಾಗೂ ನಂದ ಸುಧೀರ್ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ "ವಸುದೈವ ಕುಟುಂಬಕಂ" ಎಂದು ಹೆಸರಿಡಲಾಗಿದೆ. "ಪೊಗರು" ಚಿತ್ರದ ನಂತರ ಧ್ರುವ ಸರ್ಜಾ  ಹಾಗೂ ನಂದ ಸುಧೀರ್ ಕಾಂಬಿನೇಶನ್ ನಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ಮೂಲಕ ನಂದಕಿಶೋರ್ ಅವರು ನಂದ ಸುಧೀರ್ ಎಂದು ಹೆಸರು ಬದಲಿಸಿಕೊಂಡಿದ್ದಾರೆ.
 
"ವಸುದೈವ ಕುಟುಂಬಕಂ", ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ನೋಡಬಹುದಾದ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಲವ್, ಆಕ್ಷನ್, ಸೆಂಟಿಮೆಂಟ್ ಸೇರಿದಂತೆ ಎಲ್ಲಾ ಅಂಶಗಳು ಈ ಚಿತ್ರದಲ್ಲಿರುತ್ತದೆ. ಧ್ರುವ ಸರ್ಜಾ ಅವರ ಅಭಿನಯದ ಚಿತ್ರದ ಹಾಡುಗಳು ಜನಪ್ರಿಯವಾಗಿದೆ. ಈ ಚಿತ್ರದಲ್ಲೂ ಸಹ ಸುಮಧುರ ಗೀತೆಗಳಿರುತ್ತದೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಸತ್ಯ ಹೆಗ್ಡೆ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಸಂಕಲನವಿರುವ "ವಸುದೈವ ಕುಟುಂಬಕಂ" ಚಿತ್ರದಲ್ಲಿ ಹೆಸರಾಂತ ಹಾಗೂ ಅನುಭವಿ ಕಲಾವಿದರ ಬಹುದೊಡ್ಡ ತಾರಾಬಳಗವಿರುತ್ತದೆ‌‌. ಮುಂದಿನ ದಿನಗಳಲ್ಲಿ ಈ ಕುರಿತು ಹೆಚ್ಚಿನ ಮಾಹಿತಿ ಸಿಗಲಿದೆ.
GALLERY
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಪೊಗರು- ಚಿತ್ರದ ನಂತರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ - ನಂದ ಸುಧೀರ್ ಕಾಂಬಿನೇಶನ್ ನ ನೂತನ ಚಿತ್ರ - ವಸುದೈವ ಕುಟುಂಬಕಂ. - Chitratara.com
Copyright 2009 chitratara.com Reproduction is forbidden unless authorized. All rights reserved.

Fatal error: Uncaught ArgumentCountError: mysqli_close() expects exactly 1 argument, 0 given in /var/www/2abd550b-0850-492e-b3fe-6b047f2ad0c0/public_html/show-content.php:95 Stack trace: #0 /var/www/2abd550b-0850-492e-b3fe-6b047f2ad0c0/public_html/show-content.php(95): mysqli_close() #1 {main} thrown in /var/www/2abd550b-0850-492e-b3fe-6b047f2ad0c0/public_html/show-content.php on line 95