Chief Editor
Manohar. R (Manu)
Photo Journalist
chitrataramanu@gmail.com
+91 9845549026
ಅಪ್ಪನ ಮಮತೆಗೆ ಮಗಳೇ ಮಧುರ ರಾಗ; ‌ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಡ್ಯಾಡ್’ ಚಿತ್ರದ ‘ಮಗಳೆ ನಿನ್ನ ಜೊತೆ’ ಹಾಡು ಬಿಡುಗಡೆ
Posted date: 30 Fri, Oct 2026 10:51:00 AM
ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ನಾಯಕರಾಗಿ ಅಭಿನಯಿಸಿರುವ ಬಹುನಿರೀಕ್ಷಿತ ‘ಡ್ಯಾಡ್’ ಚಿತ್ರದ ‘ಮಗಳೆ ನಿನ್ನ ಜೊತೆ’ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಅಪ್ಪ–ಮಗಳ ನಡುವಿನ ಪ್ರೀತಿ, ಮಮತೆ ಹಾಗೂ ಭಾವನಾತ್ಮಕ ಬಾಂಧವ್ಯವನ್ನು ಸಾರುವ ಈ ಹಾಡಿಗೆ ಪ್ರೇಮಕವಿ ಕೆ. ಕಲ್ಯಾಣ್ ಸಾಹಿತ್ಯ ರಚಿಸಿದ್ದು, ದರ್ಶನ್ ಮೆಳವಂಕಿ ಧ್ವನಿಯಾಗಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಬಿಡುಗಡೆಯಾದ ಕ್ಷಣದಿಂದಲೇ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆಗಳನ್ನು ಪಡೆಯುತ್ತಿದೆ.

ಆರಂಭದಿಂದಲೂ ಕುತೂಹಲ ಮೂಡಿಸಿರುವ ‘ಡ್ಯಾಡ್’ ಚಿತ್ರ ಇದೀಗ ಬಿಡುಗಡೆ ಹಂತ ತಲುಪಿದೆ. ಕನ್ನಡ ರಾಜ್ಯೋತ್ಸವದಂದು ಚಿತ್ರದ ಬಿಡುಗಡೆ ದಿನಾಂಕ ಘೋಷಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ.

ಮೈರಾ ಕ್ರಿಯೇಷನ್ಸ್ ಲಾಂಛನದಲ್ಲಿ ಹರೀಶ್ ಪೆದ್ದಿ ಚಿತ್ರವನ್ನು ನಿರ್ಮಿಸಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ಕನ್ನೆಗಂಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನಿರ್ಮಾಪಕ ಹರೀಶ್ ಪೆದ್ದಿ ಹಾಗೂ ನಿರ್ದೇಶಕ ಅನಿಲ್ ಕನ್ನೆಗಂಟಿ ಅವರಿಗೆ ಇದು ಮೊದಲ ಕನ್ನಡ ಚಿತ್ರ. ಬಿ.ಎಸ್. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಹಲವು ವರ್ಷಗಳ ಬಳಿಕ ಶಿವರಾಜ್‌ಕುಮಾರ್ ಈ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಇರುಮುಡಿ’ ಚಿತ್ರದ ಮೂಲಕ ಗಮನ ಸೆಳೆದಿರುವ ಬೇಬಿ ನಕ್ಷತ್ರ, ಶರ್ಮಿಳಾ ಮಾಂಡ್ರೆ, ಬಾಬು ಹಾಗೂ ಮಲಯಾಳಂ ನಟ ಸೂರಜ್ ವೆಂಜರಮೂಡು ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ.

ಕನ್ನಡ, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದು, ಬಿ. ರಾಜಶೇಖರ್ ಛಾಯಾಗ್ರಹಣ ನಿರ್ವಹಿಸಿದ್ದಾರೆ.
GALLERY
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಅಪ್ಪನ ಮಮತೆಗೆ ಮಗಳೇ ಮಧುರ ರಾಗ; ‌ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಡ್ಯಾಡ್’ ಚಿತ್ರದ ‘ಮಗಳೆ ನಿನ್ನ ಜೊತೆ’ ಹಾಡು ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.

Fatal error: Uncaught ArgumentCountError: mysqli_close() expects exactly 1 argument, 0 given in /var/www/2abd550b-0850-492e-b3fe-6b047f2ad0c0/public_html/show-content.php:95 Stack trace: #0 /var/www/2abd550b-0850-492e-b3fe-6b047f2ad0c0/public_html/show-content.php(95): mysqli_close() #1 {main} thrown in /var/www/2abd550b-0850-492e-b3fe-6b047f2ad0c0/public_html/show-content.php on line 95