Chief Editor
Manohar. R (Manu)
Photo Journalist
chitrataramanu@gmail.com
+91 9845549026
Posted date: 24 Thu, Nov 2011 ? 11:15:56 AM

ಕೆ.ಎಸ್.ಪಿಕ್ಚರ್ಸ್ ಲಾಂಛನದಲ್ಲಿ ನವೀನ್(ನಾಯಕ) ಹಾಗೂ ರಮೇಶ್‌ಕುಮಾರ್ ನಿರ್ಮಿಸುತ್ತಿರುವ ‘ರೋಮಿಯೋ ಚಿತ್ರಕ್ಕಾಗಿ ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ ‘ಗೋಲ್ಡು ಪ್ಯೂರು ಗೋಲ್ಡು ನಾನು ನಿನಗೆ ಕ್ಲೀನ್ ಬೋಲ್ಡು ಎಂಬ ಹಾಡಿನ ಚಿತ್ರೀಕರಣ ರಾಕ್‌ಲೈನ್ ಸ್ಟುಡಿಯೋದಲ್ಲಿ ನಡೆದಿದೆ. ಗಣೇಶ್, ಭಾವನಾ ಅಭಿನಯಿಸಿದ ಈ ಗೀತೆಗೆ ಬಾಬಾಭಾಸ್ಕರ್ ನೃತ್ಯ ನಿರ್ದೇಶನ ಮಾಡಿದ್ದಾರೆ.
      ಮಾತಿನ ಭಾಗದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿರುವ ಈ ಚಿತ್ರಕ್ಕೆ ಈಗ ಹಾಡಿನ ಚಿತ್ರೀಕರಣ ಬಿರುಸಿನಿಂದ ಸಾಗಿದೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ.
      ಶೇಖರ್ ಅವರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ನಟರಾಜ್ ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವೈದಿ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಗಣೇಶ್, ಭಾವನಾ(ಜಾಕಿ), ಅವಿನಾಶ್, ಸಾಧುಕೋಕಿಲಾ, ರಮೇಶ್‌ಭಟ್, ಮಿತ್ರ ರಂಗಾಯಣ ರಘು, ಸುಧಾಬೆಳವಾಡಿ ಮುಂತಾದವರಿದ್ದಾರೆ.


Kannada Cinema's Latest Wallpapers
Kannada Cinema's Latest Videos
Kannada Movie/Cinema News - - Chitratara.com
Copyright 2009 chitratara.com Reproduction is forbidden unless authorized. All rights reserved.