Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಜಾನು` ಚಿತ್ರಕ್ಕೆ ಡಬ್ಬಿಂಗ್ ಪೂರ್ಣ
Posted date: 11 Sun, Mar 2012 ? 09:14:46 AM

ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಿಸುತ್ತಿರುವ ‘ಜಾನು ಚಿತ್ರಕ್ಕೆ ಆಕಾಶ್ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ಮುಕ್ತಾಯವಾಗಿದೆ.
     ಪ್ರೀತಂಗುಬ್ಬಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಸಕಲೇಶಪುರ, ಬೀದರ್, ಗುಲ್ಬರ್ಗ, ಬೆಂಗಳೂರು ಮುಂತಾದಕಡೆ ನಲವತ್ತಾರು ದಿನಗಳ ಚಿತ್ರೀಕರಣ ನಡೆದಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ.
     ಯಶ್ ನಾಯಕರಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ದೀಪಾಸನ್ನಿಧಿ. ರಂಗಾಯಣರಘು, ಶೋಭ್‌ರಾಜ್, ಸಂಗೀತ, ಮಧು, ಸಾಧುಕೋಕಿಲಾ, ಲಯೇಂದ್ರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
     ಕೃಷ್ಣ ಛಾಯಾಗ್ರಾಹಕರಾಗಿರುವ ‘ಜಾನುಗೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ದೀಪು.ಎಸ್.ಕುಮಾರ್ ಸಂಕಲನ, ಇಸ್ಮಾಯಿಲ್ ಕಲಾ ನಿರ್ದೇಶನ, ಯೋಗಿ ಸಹ ನಿರ್ದೇಶನ, ಹರ್ಷ, ಮುರಳಿ, ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ ಹಾಗೂ ಸುರೇಶ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಜಾನು` ಚಿತ್ರಕ್ಕೆ ಡಬ್ಬಿಂಗ್ ಪೂರ್ಣ - Chitratara.com
Copyright 2009 chitratara.com Reproduction is forbidden unless authorized. All rights reserved.