Chief Editor
Manohar. R (Manu)
Photo Journalist
chitrataramanu@gmail.com
+91 9845549026
ಕೃಷ್ಣ ಟಾಕೀಸ್ ಈ ವಾರ ತೆರೆಗೆ
Posted date: 14 Wed, Apr 2021 � 05:07:17 PM
ಅಜೇಯ್ ರಾವ್ ನಾಯಕನಾಗಿ ನಟಿಸಿರುವ ಕೃಷ್ಣ ಟಾಕೀಸ್ ಚಿತ್ರ ಈ ವಾರ ತೆರೆಗೆ ಬರುತ್ತಿದೆ  ಗೋಕುಲ್ ಎಂಟರ್ ಟೈನರ್ ಲಾಂಛನದಲ್ಲಿ ಗೋವಿಂದ ರಾಜು ಎ.ಹೆಚ್ ನಿರ್ಮಿಸಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಹಾಗೂ ಲಿರಿಕಲ್ ವಿಡಿಯೋ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದ್ದು, ಚಿತ್ರರಸಿಕರಿಂದ ಮೆಚ್ಚುಗೆ ಪಡೆದಿದೆ. 
 
ವಿಜಯಾನಂದ್ ನಿರ್ದೇಶನದ ಈ ಚಿತ್ರಕ್ಕೆ ಶ್ರೀಧರ್ ವಿ ಸಂಭ್ರಮದ ಸಂಗೀತ ನೀಡಿದ್ದಾರೆ. ‌ಅಭಿಷೇಕ್ ಕಾಸರಗೋಡು ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ವಿಕ್ರಂ ಸಾಹಸ ನಿರ್ದೇಶನ, ಮದನ್ ಹರಿಣಿ ನೃತ್ಯ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ನಿರಂತ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
 
ಅಜೇಯ್ ರಾವ್, ಅಪೂರ್ವ, ಸಿಂಧು ಲೋಕನಾಥ್, ಚಿಕ್ಕಣ್ಣ, ಮಂಡ್ಯ‌ ರಮೇಶ್, ಶೋಭ್ ರಾಜ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು ಮುಂತಾದವರು ಈ‌ ಚಿತ್ರದ ತಾರಾಬಳಗದಲ್ಲಿದ್ದಾರೆ...
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಕೃಷ್ಣ ಟಾಕೀಸ್ ಈ ವಾರ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.