Chief Editor
Manohar. R (Manu)
Photo Journalist
chitrataramanu@gmail.com
+91 9845549026
ಹುಲಿಗೆಮ್ಮ ದೇವಿ ಸನ್ನಿಧಿಯಲ್ಲಿ ಶ್ರೇಯಸ್ಸ್ ಕೆ ಮಂಜು ಅಭಿನಯದ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆ
Posted date: 06 Thu, May 2021 02:06:03 PM

ಖ್ಯಾತ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ಸ್ ಅವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರವನ್ನು  ನಂದ ಕಿಶೋರ್(ಪೊಗರು) ನಿರ್ದೇಶಿಸುತ್ತಿರುವ ವಿಷಯವನ್ನು ಈ ಹಿಂದೆ ತಿಳಿಸಲಾಗಿತ್ತು.

ಈ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆ ಇತ್ತೀಚೆಗೆ ಹೊಸಪೇಟೆ ಬಳಿಯ ಶ್ರೀ ಕ್ಷೇತ್ರ ಹುಲಗಿಯ ಹುಲಿಗೆಮ್ಮ ದೇವಿ ಸನ್ನಿಧಿಯಲ್ಲಿ ನೆರವೇರಿತು.

ಕೊರೋನ ಹಾವಳಿ ಕಡಿಮೆ ಆದ ಮೇಲೆ ಈ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಮುಹೂರ್ತ ಸಮಾರಂಭ ನಡೆಯಲಿದೆ. 

ಪ್ರಸ್ತುತ ಈ ಕೊರೋನ ಸಂದರ್ಭ ದೂರವಾಗಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಮೊದಲ ಹಾಗೆ ಆರಂಭವಾಗಲಿ ಎನ್ನುವುದೇ ಚಿತ್ರತಂಡದ ಆಶಯ.

 ಗುಜ್ಜಲ್ ಪುರುಷೋತ್ತಮ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇವರು  "ಟಗರು" ಚಿತ್ರದಲ್ಲಿ ‌ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದರು. 

 ಇದು ಪುರುಷೋತ್ತಮ್ ಅವರು ಗುಜ್ಜಲ್ ಟಾಕೀಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರ.


ಚಂದನ್ ಶೆಟ್ಟಿ ಸಂಗೀತ ನೀಡುತ್ತಿರುವ ಈ ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿದೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ‌.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಹುಲಿಗೆಮ್ಮ ದೇವಿ ಸನ್ನಿಧಿಯಲ್ಲಿ ಶ್ರೇಯಸ್ಸ್ ಕೆ ಮಂಜು ಅಭಿನಯದ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆ - Chitratara.com
Copyright 2009 chitratara.com Reproduction is forbidden unless authorized. All rights reserved.