Chief Editor
Manohar. R (Manu)
Photo Journalist
chitrataramanu@gmail.com
+91 9845549026
ಡಾರ್ಲಿಂಗ್ ಕೃಷ್ಣ ಅಭಿನಯದ ನೂತನ ಚಿತ್ರಕ್ಕೆ ಶಿವತೇಜಸ್ ನಿರ್ದೇಶನ.
Posted date: 28 Sat, Aug 2021 09:02:46 AM
ಸುಮಂತ್ ಕ್ರಾಂತಿ ನಿರ್ಮಾಣದ ಈ ಚಿತ್ರಕ್ಕೆ ಮಂಜುನಾಥನ‌ ಸನ್ನಿಧಿಯಲ್ಲಿ ಸ್ಕ್ರಿಪ್ಟ್ ಪೂಜೆ. ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆ ಧರ್ಮಸ್ಥಳದ ಶ್ರೀಮಂಜುನಾಥನ ಸನ್ನಿಧಿಯಲ್ಲಿ ನಡೆದಿದೆ. 
"ಮಳೆ" ಚಿತ್ರದ ಖ್ಯಾತಿಯ ಶಿವತೇಜಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ರಶ್ಮಿ ಫಿಲಂಸ್ ಮೂಲಕ ಸುಮಂತ್ ಕ್ರಾಂತಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. 
"ಕಾಲಚಕ್ರ" ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿರುವ ಸುಮಂತ್ ಕ್ರಾಂತಿ ಅವರು ಪ್ರಜ್ವಲ್ ದೇವರಾಜ್ ನಟನೆಯ ಚಿತ್ರವೊಂದನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ನಿರ್ಮಾಣದ ಮೂರನೇ ಚಿತ್ರ. ಬರ್ಕ್ಲಿ ಚಿತ್ರವನ್ನು ಸುಮಂತ್ ಕ್ರಾಂತಿ ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯರ ಸಂಗೀತ ಈ ನೂತನ ಚಿತ್ರಕ್ಕಿರಲಿದೆ.
ಸದ್ಯದಲ್ಲೇ ಚಿತ್ರದ ಬಗ್ಗೆ ಹಚ್ಚಿನ ಮಾಹಿತಿ ನೀಡುವುದಾಗಿ ಸುಮಂತ್ ಕ್ರಾಂತಿ ತಿಳಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಡಾರ್ಲಿಂಗ್ ಕೃಷ್ಣ ಅಭಿನಯದ ನೂತನ ಚಿತ್ರಕ್ಕೆ ಶಿವತೇಜಸ್ ನಿರ್ದೇಶನ. - Chitratara.com
Copyright 2009 chitratara.com Reproduction is forbidden unless authorized. All rights reserved.