Chief Editor
Manohar. R (Manu)
Photo Journalist
chitrataramanu@gmail.com
+91 9845549026
ತಿಲಕ್ ಅಭಿನಯದ ``H/34 ಪಲ್ಲವಿ ಟಾಕೀಸ್`` ಚಿತ್ರದ ಹಾಡು ಬಿಡುಗಡೆ
Posted date: 28 Fri, May 2021 10.20:15 PM
ನಟ ತಿಲಕ್ ಅಭಿನಯದ ``H/34 ಪಲ್ಲವಿ ಟಾಕೀಸ್" ಚಿತ್ರದ ``ಬರೆವೆ ಬರೆವೆ  ಒಲವ ಕವನ" ಎಂಬ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಶ್ರೀನಿವಾಸ್ ಚಿಕ್ಕಣ್ಣ(ಸೀನಿ) ಬರೆದಿರುವ ಈ ಹಾಡನ್ನು ಬಾಲಿವುಡ್‌ ನ ಜನಪ್ರಿಯ ಗಾಯಕ ಅಂಕಿತ್ ತಿವಾರಿ ಹಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅಜನೀಶ್   ಲೋಕನಾಥ್ ಸಂಗೀತ ನೀಡಿದ್ದಾರೆ. 
ಇತ್ತೀಚೆಗೆ ಬಿಡುಗಡೆಯಾಗಿರುವ ಈ ಹಾಡಿಗೆ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ.
ಸದ್ಯದಲ್ಲೇ ಚಿತ್ರದ ಟ್ರೇಲರ್ ಬಿಡುಗಡೆಗಲಿದೆ. ಜೂನ್ ಎರಡನೇ ವಾರದಲ್ಲಿ ಓ ಟಿ ಟಿ ಫ್ಲಾಟ್ ಫಾರಂ ಮೂಲಕ ಚಿತ್ರ ಬಿಡುಗಡೆಯಾಗಲಿದೆ. 
ಕಾಲಭೈರವ ಆರ್ಟ್ಸ್ ಲಾಂಛನದಲ್ಲಿ ಮಂಜುನಾಥ್ ಕೆ ಹಾಗೂ ರವಿಕಿರಣ್ ಎಂ ಗೌಡ ನಿರ್ಮಿಸಿರುವ ಈ ಚಿತ್ರವನ್ನು ಶ್ರೀನಿವಾಸ್ ಚಿಕ್ಕಣ್ಣ (ಸೀನಿ) ನಿರ್ದೇಶಿಸಿದ್ದಾರೆ. 
ಈ ಹಿಂದೆ ``6ನೇ ಮೈಲಿ`` ಚಿತ್ರವನ್ನು ನಿರ್ದೇಶಿಸಿದ್ದ, ಶ್ರೀನಿವಾಸ್ ಚಿಕ್ಕಣ್ಣ ಅವರಿಗೆ ಇದು ಎರಡನೇ ನಿರ್ದೇಶನದ ಚಿತ್ರ. 
ಹಾರಾರ್ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. 
ಮನೋಹರ್ ಜೋಶಿ ಛಾಯಾಗ್ರಹಣ ಹಾಗೂ  ಅಕ್ಷಯ್ ಪಿ ರಾವ್ ಸಂಕಲನ ಈ ಚಿತ್ರಕ್ಕಿದೆ.
ತಿಲಕ್ ಅವರಿಗೆ ನಾಯಕಿಯಾಗಿ ಯಜ್ಞಾ ಶೆಟ್ಟಿ ಅಭಿನಯಿಸಿದ್ದಾರೆ. ಸಚೇಂದ್ರ ಪ್ರಸಾದ್, ಅವಿನಾಶ್, ಸುಧಾ ಬೆಳವಾಡಿ, ಅಚ್ಯುತಕುಮಾರ್, ಪದ್ಮಜಾರಾವ್, ಕುರಿ ಪ್ರತಾಪ್, ವಿಶ್ವ, ಅಮೃತ ಮಯೂರಿ, ರಾಜೇಶ್ವರಿ, ರಾಕ್ ಲೈನ್ ಸುಧಾಕರ್, ಅಜಯ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ತಿಲಕ್ ಅಭಿನಯದ ``H/34 ಪಲ್ಲವಿ ಟಾಕೀಸ್`` ಚಿತ್ರದ ಹಾಡು ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.