Chief Editor
Manohar. R (Manu)
Photo Journalist
chitrataramanu@gmail.com
+91 9845549026
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹುಟ್ಟುಹಬ್ಬದಂದು ಬಿಡುಗಡೆಯಾಯಿತು ನೂತನ ಚಿತ್ರದ ಮೋಷನ್ ಪೋಸ್ಟರ್.
Posted date: 13 Tue, Jul 2021 06:28:46 PM
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹುಟ್ಟುಹಬ್ಬದಂದು  A r k ಪ್ರೊಡಕ್ಷನ್ಸ್ ಲಾಂಛನದಲ್ಲಿ ಚೌಧರಿ ಅವರು ನಿರ್ಮಿಸುತ್ತಿರುವ, ನೂತನ ಚಿತ್ರದ ಮೋಷನ್ ಪೋಸ್ಟರ್ A2 music ಮೂಲಕ ಬಿಡುಗಡೆಯಾಗಿದೆ.
ಶಿವರಾಜಕುಮಾರ್   ನಾಯಕರಾಗಿ ಅಭಿನಯಿಸಲಿರುವ ಈ ಚಿತ್ರವನ್ನು ಕೊಟ್ರೇಶ್ ಚಪ್ಪರದಹಳ್ಳಿ  ನಿರ್ದೇಶಿಸುತ್ತಿದ್ದಾರೆ. ಎ.ಹರ್ಷ, ಯೋಗಿ
 ಜಿ ರಾಜ್ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ ಕೊಟ್ರೇಶ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.
 ನನ್ನಂತಹ ಹೊಸ ನಿರ್ದೇಶಕನ ಚಿತ್ರದಲ್ಲಿ ಶಿವಣ್ಣನಂತಹ ಮೇರು ನಟ ಅಭಿನಯಿಸಲು ಒಪ್ಪಿರುವುದು ನಿಜಕ್ಕೂ ಸಂತಸ ತಂದಿದೆ ಎನ್ನುತ್ತಾರೆ ಕೊಟ್ರೇಶ್ ಚಪ್ಪರದಹಳ್ಳಿ.
  ಶಿವರಾಜಕುಮಾರ್ ಅವರ ಹುಟ್ಟುಹಬ್ಬದಂದು ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ನೂತನ ಚಿತ್ರದ ಚಟುವಟಿಕೆಗಳಿಗೆ ಚಾಲನೆ ನೀಡಿದ್ದೀವಿ.‌ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಸದ್ಯದಲ್ಲೇ ನೀಡುವುದಾಗಿ ಕೊಟ್ರೇಶ್ ತಿಳಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹುಟ್ಟುಹಬ್ಬದಂದು ಬಿಡುಗಡೆಯಾಯಿತು ನೂತನ ಚಿತ್ರದ ಮೋಷನ್ ಪೋಸ್ಟರ್. - Chitratara.com
Copyright 2009 chitratara.com Reproduction is forbidden unless authorized. All rights reserved.