Chief Editor
Manohar. R (Manu)
Photo Journalist
chitrataramanu@gmail.com
+91 9845549026
ಬಳ್ಳಾರಿಯಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿದ`ಅಮರ ಪ್ರೇಮಿ ಅರುಣ್`
Posted date: 12 Thu, Aug 2021 05:31:49 PM
ಒಲವು ಸಿನಿಮಾ ಸಂಸ್ಥೆಯು ನಿರ್ಮಿಸುತ್ತಿರುವ ʼಅಮರ ಪ್ರೇಮಿ ಅರುಣ್ʼ ಸಿನಿಮಾ, ತನ್ನ ಮೊದಲ ಸುತ್ತಿನ ಚಿತ್ರೀಕರಣವನ್ನು ಬಳ್ಳಾರಿ ನಗರದಲ್ಲಿ ಮುಗಿಸಿದ್ದು ಈಗ ಮತ್ತೆ ಬಳ್ಳಾರಿಯಲ್ಲಿಯೇ ನಡೆಯಲಿರುವ ಎರಡನೇ ಸುತ್ತಿನ ಚಿತ್ರೀಕರಣಕ್ಕೆ ತಂಡ ತಯಾರಾಗುತ್ತಿದೆ. 

ಬಳ್ಳಾರಿ ನಗರದ ಪ್ರಮುಖ ಜಾಗಗಳಲ್ಲಿ ನಾಯಕ ಹರಿಶರ್ವಾ, ನಾಯಕಿ ದೀಪಿಕಾ ಆರಾಧ್ಯ ಸೇರಿದಂತೆ ಧರ್ಮಣ್ಣ, ಭೂಮಿಕಾ ಭಟ್, ಮಹೇಶ್ ಬಂಗ್, ಬಲರಾಜ್ವಾಡಿ, ರೋಹಿಣಿ, ವಿಜಯಲಕ್ಷ್ಮಿ ಮತ್ತು ಅನೇಕ ಕಲಾವಿದರ ನಟನೆಯಲ್ಲಿ ದೃಶ್ಯಗಳನ್ನು ಚಿತ್ರಿಸಲಾಗಿದೆ. 

ʼಅಮರ ಪ್ರೇಮಿ ಅರುಣ್ʼ ಸಿನಿಮಾ ವಿಶೇಷ ಪಾತ್ರಗಳಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿರುವ ಪದ್ಮಶ್ರೀ ಜೋಗತಿ ಮಂಜಮ್ಮನವರು ಮತ್ತು ಖ್ಯಾತ ರಂಗಕರ್ಮಿ ಹುಲಿಗೆಪ್ಪ ಕಟ್ಟಿಮನಿ ಅವರು ನಟಿಸಿದ್ದಾರೆ. 

ಚಿತ್ರಕ್ಕೆ ಪ್ರವೀಣ್ ಕುಮಾರ್ ಜಿ ಅವರ ರಚನೆ-ನಿರ್ದೇಶನ, ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಕಿರಣ್ ರವೀಂದ್ರನಾಥ್ ಅವರ ಸಂಗೀತ, ನಿರಂಜನ್ ದೇವರ ಮನೆಯವರ ಸಂಕಲನ, ಮಂಡ್ಯ ಮಂಜು ಅವರ ಕಾರ್ಯಕಾರಿ ನಿರ್ಮಾಣ, ಜಯಂತ ಕಾಯ್ಕಿಣಿ ಮತ್ತು ಯೋಗರಾಜ್ ಭಟ್ ಅವರ ಸಾಹಿತ್ಯ, ಸುಧೀಂದ್ರ ವೆಂಕಟೇಶ್ ಅವರ ಮಾಧ್ಯಮ ಸಂಪರ್ಕವಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಬಳ್ಳಾರಿಯಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿದ`ಅಮರ ಪ್ರೇಮಿ ಅರುಣ್` - Chitratara.com
Copyright 2009 chitratara.com Reproduction is forbidden unless authorized. All rights reserved.